ರಾಜ್ಯ

ರಾಜ್ಯದಲ್ಲಿ ಕೊರೋನಾ ಇಳಿಕೆ: ಇಂದು ಹೊಸದಾಗಿ 958 ಪ್ರಕರಣ ಪತ್ತೆ, 9 ಬಲಿ!

Vishwanath S

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಇಳಿಕೆ, ಇಂದು 958 ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,12,340ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 9 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಸೋಂಕಿನಿಂದ 12,038 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರು, ಮೈಸೂರು, ಹಾಸನದಲ್ಲಿ ತಲಾ ಇಬ್ಬರು, ತುಮಕೂರು, ಬೀದರ್ ಮತ್ತು ಬಳ್ಳಾರಿಯಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. 

ಬೆಂಗಳೂರಿನಲ್ಲಿ ಇಂದು 550 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 3,84,366ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿಗೆ 2 ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 1,206 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 8,86,547ಕ್ಕೆ ಏರಿಕೆಯಾಗಿದೆ. ಇನ್ನು 13,736 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 217 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

SCROLL FOR NEXT