ರಾಜ್ಯ

ಕೋವಿಡ್‌ 19: ಸುರಕ್ಷಿತ ಕ್ರಿಸ್‌ಮಸ್‌, ಹೊಸ ವರ್ಷಾಚರಣೆಗೆ ಬಿಬಿಎಂಪಿ ಮಾರ್ಗಸೂಚಿ ಬಿಡುಗಡೆ

Lingaraj Badiger

ಬೆಂಗಳೂರು: ಕೋವಿಡ್‌-19 ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಕ್ರಿಸ್‌ಮಸ್‌ ಹಾಗೂ ಹೊಸ ವರ್ಷಾಚರಣೆ ಕುರಿತು ಬಿಬಿಎಂಪಿ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಚರ್ಚ್‌, ದೇವಸ್ಥಾನ, ಮಸೀದಿ ಮತ್ತು ಇತರ ಧಾರ್ಮಿಕ ಸ್ಥಳಗಳಲ್ಲಿ ಹೆಚ್ಚು ಜನರು ಸೇರದಂತೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಹಬ್ಬದ ಆಚರಣೆ ಸಂದರ್ಭದಲ್ಲಿ ಜನರು ಹಸ್ತಲಾಘವ ಮತ್ತು ಆಲಿಂಗನದಿಂದ ದೂರವಿರಬೇಕು. ಡಿ.30ರಿಂದ 2021ರ ಜ.2ರವರೆಗೆ ಕ್ಲಬ್‌, ಪಬ್, ರೆಸ್ಟೋರೆಂಟ್‌ ಮತ್ತು ಇತರ ಸಾರ್ವಜನಿಕ ಸ್ಥಳಗಳಲ್ಲಿ ಗುಂಪುಗೂಡುವಿಕೆ, ವಿಶೇಷ ಡಿಜೆ, ನೃತ್ಯ ಕಾರ್ಯಕ್ರಮಗಳನ್ನು, ವಿಶೇಷ ಪಾರ್ಟಿಗಳನ್ನು ನಿಷೇಧಿಸಲಾಗಿದೆ. ಆದರೆ, ಕ್ಲಬ್‌, ಪಬ್‌, ರೆಸ್ಟೋರೆಂಟ್‌ಗಳು ಎಂದಿನಂತೆ ತೆರೆದಿರಲಿದೆ ಎಂದು ಬಿಬಿಎಂಪಿ ಆದೇಶದಲ್ಲಿ ತಿಳಿಸಿದೆ.

ಈ ಸಂದರ್ಭದಲ್ಲಿ 65 ವರ್ಷದ ಹಿರಿಯರು ಮತ್ತು 10 ವರ್ಷದೊಳಗಿನ ಮಕ್ಕಳು ಮನೆಯಲ್ಲಿಯೇ ಇರಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರಗಳನ್ನು ಕಾಯ್ದುಕೊಳ್ಳುವುದು ಕಡ್ಡಾಯ. ಹೋಟೆಲ್‌, ಮಾಲ್‌, ಪಬ್‌, ರೆಸ್ಟೋರೆಂಟ್‌ಗಳಲ್ಲಿ ಥರ್ಮಲ್‌ ಸ್ಕ್ರೀನಿಂಗ್‌ ಮತ್ತು ಸ್ಯಾನಿಟೈಸರ್‌ ಬಳಕೆ ಕಡ್ಡಾಯ.

ಈ ಪ್ರದೇಶಗಳಲ್ಲಿ ಆನ್‌ಲೈನ್‌ ಅಥವಾ ಟೋಕನ್‌ ಪದ್ಧತಿಯನ್ನು ಸ್ಥಳ ಕಾಯ್ದಿರಿಸಲು ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚಿಸಲಾಗಿದೆ.

SCROLL FOR NEXT