ರಾಜ್ಯದಲ್ಲಿ ಇಂದು ಹೊಸದಾಗಿ 1,143 ಪ್ರಕರಣ ಪತ್ತೆ, ಕೊರೋನಾಗೆ 1 ಬಲಿ!
ರಾಜ್ಯದಲ್ಲಿ ಇಂದು 1,143 ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,13,483ಕ್ಕೆ ಏರಿಕೆಯಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಇಂದು 1,143 ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,13,483ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 1 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಸೋಂಕಿನಿಂದ 12,039 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 642 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 3,85,008ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿಗೆ 1 ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಇಂದು 1,268 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 8,87,815ಕ್ಕೆ ಏರಿಕೆಯಾಗಿದೆ. ಇನ್ನು 13,610 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 208 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.