ನಟಿ ರಾಗಿಣಿ ದ್ವಿವೇದಿ 
ರಾಜ್ಯ

ಜೈಲಿನಲ್ಲಿರುವ ನಟಿ ರಾಗಿಣಿಗೆ ಹೊಟ್ಟೆನೋವು: ಆಸ್ಪತ್ರೆಗೆ ದಾಖಲು

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ  ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿ ರಾಗಿಣಿ ದ್ವಿವೇದಿ ಅವರನ್ನು ಆನಾರೋಗ್ಯದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ  ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿ ರಾಗಿಣಿ ದ್ವಿವೇದಿ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಜೈಲಿನಲ್ಲಿರುವ ರಾಗಿಣಿ ದ್ವಿವೇದಿ ಅವರಿಗೆ ನಿನ್ನೆ ತಡರಾತ್ರಿ ಉಸಿರಾಟ, ಹೊಟ್ಟೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಜೈಲಿನ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಯ ಹಿನ್ನೆಲೆಯಲ್ಲಿ ತಡರಾತ್ರಿಯೇ ಪರಪ್ಪನ ಅಗ್ರಹಾರ ಜೈಲಿನಿಂದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಆಸ್ಪತ್ರೆಯಲ್ಲಿರುವ ರಾಗಿಣಿ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಈ ಮಧ್ಯೆ ರಾಗಿಣಿ ಅವರ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ಜನವರಿ ಮೊದಲ ವಾರಕ್ಕೆ ಮುಂದೂಡಿದೆ. ಈ ಮೂಲಕ ಪರಪ್ಪನ ಅಗ್ರಹಾರ ಜೈಲಿನಲ್ಲೇ ರಾಗಿಣಿ ಹೊಸ ವರ್ಷ ಆಚರಿಸುವುದು ಅನೀವಾರ್ಯವಾಗಿದೆ.

ಕಳೆದ ಮೂರು ತಿಂಗಳಿನಿಂದ ರಾಗಿಣಿ ಜೈಲುವಾಸ ಅನುಭವಿಸುತ್ತಿದ್ದಾರೆ. ಕರ್ನಾಟಕ ಹೈಕೋರ್ಟ್ ನಲ್ಲಿ ಜಾಮೀನು ಸಿಗದ ಕಾರಣ ಅವರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಅಲ್ಲಿಯೂ ಅವರಿಗೆ ನಿರಾಸೆಯಾಗಿದೆ. ಡ್ರಗ್ಸ್ ಜಾಲದ ನಂಟು ಆರೋಪದ ಮೇರೆಗೆ ಸಿಸಿಬಿ ಅಧಿಕಾರಿಗಳು ಸೆಪ್ಟೆಂಬರ್ 4 ರಂದು ಅವರ ಮನೆ ಮೇಲೆ ದಾಳಿ ನಡೆಸಿ, ವಶಕ್ಕೆ ಪಡೆದುಕೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT