ರಾಜ್ಯ

ವಿಸ್ಟ್ರಾನ್  ಕಂಪನಿ ಹಿಂಸಾಚಾರ: ಐಫೋನ್ ಘಟಕಕ್ಕೆ ಪೊಲೀಸ್ ಬಿಗಿ ಭದ್ರತೆ

Shilpa D

ಕೋಲಾರ: ಡಿಸೆಂಬರ್ 12 ರಂದು ಕಾರ್ಮಿಕರಿಂದ ದೊಡ್ಡ ಪ್ರಮಾಣದ ಹಿಂಸಾಚಾರಕ್ಕೆ ಸಾಕ್ಷಿಯಾದ ನರಸಪುರ ಕೈಗಾರಿಕಾ ಕೇಂದ್ರದಲ್ಲಿ,  ವಿಸ್ಟ್ರಾನ್ ಕಾರ್ಪೊರೇಷನ್ ಘಟಕದ ಬಳಿ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದಾರೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ (ಕೇಂದ್ರ) ಸೀಮಂತ್ ಕುಮಾರ್ ಸಿಂಗ್ ಹೇಳಿದ್ದಾರೆ.

ಕಂಪನಿ ತನ್ನ ಕೆಲಸ ಮತ್ತೆ ಆರಂಭಿಸಲು ಪೊಲೀಸರು ಅಗತ್ಯವಾದ ಎಲ್ಲಾ ನೆರಲವು ನೀಡುತ್ತಿದೆ. ವಿಸ್ಚ್ರಾನ್ ಕಂಪನಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ನಾಲ್ಕು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದುವರೆಗೆ ಕೋಲಾರ ಪೊಲೀಸರು 167 ಕಾರ್ಮಿಕರನ್ನು ಬಂಧಿಸಿದ್ದಾರೆ. ಕಂಪನಿಯ ಸಿಸಿಟಿವಿ ದೃಶ್ಯಾವಳಿ ಆಧರಿಸಿ ಮಹಿಳೆ ಸೇರಿದಂತೆ 167 ಕೆಲಸಗಾರರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಕೆಲವು ಪ್ರತಿಭಟನಾಕಾರರು ನಾಪತ್ತೆಯಾಗಿದ್ದು, ಶೀಘ್ರವೇ ಅವರನ್ನು ಬಂಧಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

ಎಲ್ಲಾ ಆಯಾಮಗಳಿಂದಲೂ ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ಕೋಲಾರ ಎಸ್ ಪಿ ಕಾರ್ತಿಕ್ ರೆಡ್ಡಿ ತಿಳಿಸಿದ್ದಾರೆ. ವಿಸ್ಟ್ರಾನ್ ಕಂಪನಿಗೆ ನೌಕರರನ್ನು ಪೂರೈಸುವ ಆರು ಗುತ್ತಿಗೆದಾರರನ್ನು ತನಿಖೆಗೊಳಪಡಿಸಲಾಗಿದೆ.

ಇನ್ನೋವಾ ಸೋರ್ಸ್, ಕ್ರಿಯೆಟಿವ್ಸ್, ಕ್ವೆಸ್ ಕಾರ್ಪ್, ನೀಡ್ಸ್, ರ್ಯಾಂಡ್ ಸ್ಚಾಡ್ ಮತ್ತು ಅದೆಕೋ ಗ್ರೂಪ್ ಕಂಪನಿಯ ಅಧಿಕಾರಿಗಳು ಮತ್ತು ಕೆಲಸಗಾರರನ್ನು ವಿಚಾರಣೆಗೊಳಪಡಿಸಲಾಗಿದೆ. ಕಾರ್ಮಿಕ ಆಯೋಗ ಮತ್ತು ಹಿರಿಯ ಅಧಿಕಾರಿಗಳು ಪ್ರಕರಣ ಸಂಬಂಧ ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ತಿಳಿಸಲಾಗಿದೆ.

SCROLL FOR NEXT