ಶಿವಮೊಗ್ಗ: ತನ್ನಿಬ್ಬರು ಮಕ್ಕಳನ್ನು ಕೆರೆಗೆ ಎಸೆದು ತಾಯಿಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಮೈದೊಳಲು ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ರಚನಾ(5), ಯಮುನಾ(7) ಹಾಗೂ ತಾಯಿ ಮಂಜುಳಾ (35) ಎಂದು ಗುರುತಿಸಲಾಗಿದೆ.
ಡಿಸೆಂಬರ್ 18ರಿಂದ ಮಂಜುಳಾ ತನ್ನಿಬ್ಬರು ಮಕ್ಕಳೊಂದಿಗೆ ಮಲ್ಲಾಪುರ ಗ್ರಾಮದಿಂದ ನಾಪತ್ತೆಯಾಗಿದ್ದಳು. ಈ ಸಂಬಂಧ ಡಿಸೆಂಬರ್ 21ರಂದು ಆಕೆಯ ಕುಟುಂಬದವರು ಹೊಳೆಹಿನ್ನೂರು ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಇಂದು ಕೆರೆಯಲ್ಲಿ ದುರ್ವಾಸನೆ ಬಂದದ್ದರಿಂದಾಗಿ ಘಟನೆ ಬೆಳಕಿಗೆ ಬಂದಿದೆ. ಕೌಟುಂಬಿಕ ಕಲಹವೇ ಈ ಘಟನೆಗೆ ಕಾರಣವೆಂದು ಶಂಕಿಸಲಾಗಿದೆ.
ಹೊಳೆಹೊನ್ನೂರು ಠಾಣೆ ಪೋಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಶಿವಮೊಗ್ಗದ ಶವಾಗಾರಕ್ಕೆ ಕಳುಹಿಸಲಾಗಿದೆ.