ರಾಜ್ಯ

ಎಪಿಎಂಸಿ ಕಾಯ್ದೆಗೆ ತಿದ್ದುಪಡಿ: ಇಂದು ರೈತರನ್ನು ಭೇಟಿ ಮಾಡಲಿರುವ ಸಿಎಂ ಯಡಿಯೂರಪ್ಪ 

Sumana Upadhyaya

ಬೆಂಗಳೂರು: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂಸಿ) ಕಾಯ್ದೆ ತಿದ್ದುಪಡಿಯಿಂದ ರೈತರಲ್ಲಿ ಉಂಟಾಗಿರುವ ಗ್ರಹಿಕೆ ಬಗ್ಗೆ ಅರಿವು ಮೂಡಿಸಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಶುಕ್ರವಾರ ರೈತರನ್ನು ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಆಲಿಸಲಿದ್ದಾರೆ.

ಇನ್ನೊಂದೆಡೆ ಕೇಂದ್ರ ಸರ್ಕಾರದ ನೂತನ ಕೃಷಿ ನೀತಿ ಬಗ್ಗೆ ರೈತರಲ್ಲಿ ಅಸಮಾಧಾನವಿದ್ದು ಪ್ರತಿಭಟನೆ 28ನೇ ದಿನಕ್ಕೆ ಕಾಲಿಟ್ಟಿದೆ.

ಇಂದು ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿಯವರ ಜಯಂತಿಯಾಗಿದ್ದು ಈ ಸಂದರ್ಭದಲ್ಲಿ ಕೃಷಿ ಸಮ್ಮಾನ್ ಯೋಜನೆ ದಿನವನ್ನು ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ಇಂದು ರೈತರನ್ನು ಯಶವಂತಪುರದ ಎಪಿಎಂಪಿ ಮಾರುಕಟ್ಟೆಯಲ್ಲಿ ಭೇಟಿ ಮಾಡಲಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಕಾಯ್ದೆಗೆ ತಂದಿರುವ ತಿದ್ದುಪಡಿ ಬಗ್ಗೆ ಜನರ ಮನವೊಲಿಸುವ ಪ್ರಯತ್ನ ಮಾಡಲಿದ್ದಾರೆ.

ತಿದ್ದುಪಡಿಯಿಂದ ರೈತರಿಗೆ ಯಾವ ರೀತಿ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿಗಳು ವಿವರಿಸಲಿದ್ದಾರೆ. ತಿದ್ದುಪಡಿಯಿಂದ ಯಾವುದೇ ಸಮಸ್ಯೆಯುಂಟಾಗುವುದಿಲ್ಲ, ತಿದ್ದುಪಡಿಯ ಅವಶ್ಯಕತೆ ಏಕಿತ್ತು, ನನ್ನ ಇಳುವರಿ, ನನ್ನ ಹಕ್ಕು ಎಷ್ಟು ಅಗತ್ಯವಿದೆ ಎಂಬುದನ್ನು ಮುಖ್ಯಮಂತ್ರಿ ರೈತರಿಗೆ ಮನದಟ್ಟು ಮಾಡಲಿದ್ದಾರೆ.

SCROLL FOR NEXT