ರಾಜ್ಯ

ರಾಜ್ಯದಲ್ಲಿ ಇಂದು ಕೊರೋನಾದಿಂದ 7 ಸಾವು, ಬೆಂಗಳೂರಿನಲ್ಲಿ 471 ಸೇರಿ 857 ಮಂದಿಗೆ ಪಾಸಿಟಿವ್

Lingaraj Badiger

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಶನಿವಾರ 857 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,15,345ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಏಳು ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,051ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಇಂದು ಬೆಂಗಳೂರಿನಲ್ಲಿ 471 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ನಗರದಲ್ಲಿ ಸೋಂಕಿನಿಂದ ನಾಲ್ವರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 964 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 8,89,881ಕ್ಕೆ ಏರಿಕೆಯಾಗಿದೆ. ಇನ್ನು 13,394 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 205 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

SCROLL FOR NEXT