ರಾಜ್ಯ

ಕಾರವಾರ: ಇಷ್ಟಕ್ಕೆ ವಿರುದ್ಧವಾಗಿ ಮದುವೆಯಾಗಿದ್ದ ಮಗಳನ್ನು ಕಿಡ್ನಾಪ್ ಮಾಡಿದ ತಾಯಿ!

ತನ್ನ ಇಷ್ಟಕ್ಕೆ ವಿರುದ್ಧವಾಗಿ ಬೇರೊಬ್ಬನನ್ನು ಪ್ರೀತಿಸಿ ಮದುವೆಯಾಗಿದ್ದ ಮಗಳನ್ನು ತಾಯಿಯೇ ಕಿಡ್ನಾಪ್ ಮಾಡಿ ಪರಾರಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ನಡೆದಿದೆ.

ಕಾರವಾರ: ತನ್ನ ಇಷ್ಟಕ್ಕೆ ವಿರುದ್ಧವಾಗಿ ಬೇರೊಬ್ಬನನ್ನು ಪ್ರೀತಿಸಿ ಮದುವೆಯಾಗಿದ್ದ ಮಗಳನ್ನು ತಾಯಿಯೇ ಕಿಡ್ನಾಪ್ ಮಾಡಿ ಪರಾರಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ನಡೆದಿದೆ.

ಕಿಡ್ನಾಪ್ ಆದ ಮಹಿಳೆಯನ್ನು ರುತಿಕಾ ಎಂದು ಗುರುತಿಸಲಾಗಿದ್ದು ಈಕೆಯ ತಾಯಿ ರೂಪ ಸಿರ್ಸಿಕರ್ ಸ್ವತಃ ಮಗಳನ್ನು ಕಿಡ್ನಾಪ್ ಮಾಡಿ ಕುಟುಂಬದವರೊಡನೆ ಪರಾರಿಯಾಗಿದ್ದಾಳೆ.

ರುತಿಕಾ ಶಿರಸಿಯ ಬಸವೇಶ್ವರ ನಗರದ ಮಣಿಕಂಠ ಎಂಬುವವನನ್ನು ಪ್ರೀತಿಸಿ ವಿವಾಹವಾಗಿದ್ದಳು.  ಆದರೆ ಈ ಬಗ್ಗೆ ರುತಿಕಾ ತಾಯಿ ರೂಪಾಗೆ ಒಪ್ಪಿಗೆ ಇರಲಿಲ್ಲ. ಮಗಳು ತನಗಿಷ್ಟವಿಲ್ಲದ ಯುವಕನನ್ನು ಮದುವೆಯಾಗಿದ್ದಾಳೆ ಎಂಬ ಕೋಪಕ್ಕೆ ಇಂದು ಬೆಳಿಗ್ಗೆ ಮೂವರು ಯುವಕರೊಡನೆ ರುತಿಕಾ ಮನೆಗೆ ಆಗಮಿಸಿದ್ದಾಳೆ. ಆ ವೇಳೆ ರುತಿಕಾ ಮನೆಯವರೆಲ್ಲರ ಮೇಲೆ ಪೆಪ್ಪರ್ ಸ್ಪ್ರೇ ಎರಚಿದ ರೂಪಾ ಮಗಳು ರುತಿಕಾಳನ್ನು ತಾನು ಬಂದಿದ್ದ ಕಾರಿನಲ್ಲಿ ಕಿಡ್ನಾಪ್ ಮಾಡಿಕೊಂಡು ಪರಾರಿಯಾಗಿದ್ದಾಳೆ

ಘಟನೆ ಸಂಬಂಧ ರುತಿಕಾ ಪತಿ ಮಣಿಕಂಠ ಶಿರಸಿ ಮಾರುಕಟ್ಟೆ ಪೋಲೀಸರಲ್ಲಿ ದೂರು ದಾಖಲಿಸಿದ್ದಾರೆ. ದೂರು ಸ್ವೀಕರಿಸಿರುವ ಪೋಲೀಸರೀಗ ರೂಪಾ ಹಾಗೂ ರುತಿಕಾಗಾಗಿ ಶೋಧ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

ಶಾಕಿಂಗ್ Video: CJP ಪ್ರತಿಭಟನೆ ತಡೆಯಲು ಬ್ಯಾರಿಕೇಡ್‌ ಮಾತ್ರವಲ್ಲ, ರಸ್ತೆಯಲ್ಲಿ ಸ್ಪೈಕ್ ಸ್ಟ್ರಿಪ್‌ ಅಳವಡಿಕೆ!

ಜ್ಞಾನೇಶ್ ಕುಮಾರ್, ಪ್ರಧಾನಿ ಮೋದಿ ಇಬ್ಬರೂ ಮನೆಗೆ ಹೋಗುತ್ತಾರೆ, ನಂತರ ಪ್ರಜಾಪ್ರಭುತ್ವದ ದುರಸ್ತಿ: ರಾಹುಲ್ ಗಾಂಧಿ

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?