ರಾಜ್ಯದಲ್ಲಿ ಕೊರೋನಾ ಇಳಿಕೆ: ರಾಜ್ಯದಲ್ಲಿ ಇಂದು 911 ಪ್ರಕರಣ ಪತ್ತೆ, 11 ಬಲಿ
ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಇಂದು 911 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,16,256ಕ್ಕೆ ಏರಿಕೆಯಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಇಂದು 911 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,16,256ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 11 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,062ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಇಂದು ಬೆಂಗಳೂರಿನಲ್ಲಿ 542 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ನಗರದಲ್ಲಿ ಸೋಂಕಿನಿಂದ ಎಂಟು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಇಂದು 1214 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 8,91,095ಕ್ಕೆ ಏರಿಕೆಯಾಗಿದೆ. ಇನ್ನು 13,080 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 209 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.