ಕೆ.ಸುಧಾಕರ್ 
ರಾಜ್ಯ

ಬ್ರಿಟನ್‌ನಿಂದ ಬಂದ 26 ಮಂದಿಯಲ್ಲಿ ಕೋವಿಡ್ ಸೋಂಕು ದೃಢ: ಸುಧಾಕರ್

ಬ್ರಿಟನ್‌ನಿಂದ ರಾಜ್ಯಕ್ಕೆ ಬಂದ 1,614 ಜನರನ್ನು ಈವರೆಗೆ ತಪಾಸಣೆಗೆ ಒಳಪಡಿಸಲಾಗಿದ್ದು, ಈ ಪೈಕಿ 26 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ತಿಳಿಸಿದ್ದಾರೆ.

ಬೆಂಗಳೂರು: ಬ್ರಿಟನ್‌ನಿಂದ ರಾಜ್ಯಕ್ಕೆ ಬಂದ 1,614 ಜನರನ್ನು ಈವರೆಗೆ ತಪಾಸಣೆಗೆ ಒಳಪಡಿಸಲಾಗಿದ್ದು, ಈ ಪೈಕಿ 26 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬ್ರಿಟನ್ ನಿಂದ ಬಂದವರ ಆರೋಗ್ಯ ತಪಾಸಣೆ ನಿಮ್ಹಾನ್ಸ್‌ನಲ್ಲಿ ನಡೆದಿದ್ದು, ಈ ಮಾಹಿತಿಯನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.

ಸೋಂಕು ಪತ್ತೆ ಆದ ಎಲ್ಲರಿಗೂ ಸರ್ಕಾರದ ಸುಪರ್ದಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರಲ್ಲಿ ಯಾವೇ ಥರದ ಗಂಭೀರ ಲಕ್ಷಣಗಳು ಕಂಡುಬಂದಿಲ್ಲ. ಯಾರೂ ಹೋಮ್‌ ಐಸೋಲೇಷನ್‌ನಲ್ಲಿ ಇಲ್ಲ’ ಎಂದೂ ಅವರು ಸ್ಪಷ್ಟಪಡಿಸಿದರು. 

ವಿದೇಶದಿಂದ ಬಂದವರ ಪೈಕಿ ಅನೇಕರು ಇನ್ನೂ ಪತ್ತೆ ಆಗಿಲ್ಲ. ಅದರಲ್ಲೂ ಬ್ರಿಟನ್‌ನಿಂದ ಬಂದವರಿದ್ದಾರೆ. ಅನೇಕರು ಮೊಬೈಲ್‌ ಸ್ವಿಚ್ ಆಫ್‌ ಮಾಡಿಕೊಂಡಿದ್ದಾರೆ. ಅವರನ್ನು ಪತ್ತೆ ಮಾಡುವ ಕೆಲಸ ಮುಂದುವರಿದೆ, AWW, ಪ್ರತಿಕ್ರಿಯಿಸಿದ ಸಚಿವರು, ‘ವರದಿ ಬರಲು ಕನಿಷ್ಠ 48 ಗಂಟೆ ಬೇಕಾಗಿದೆ. ನಿಮ್ಹಾನ್ಸ್‌ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿಲಾಗಿದೆ. ಇಡೀ ದೇಶದ ಎಲ್ಲ ರಾಜ್ಯಗಳಿಂದ ಬಂದ ವರದಿಯನ್ನು ಪರಿಶೀಲಿಸಿ, ಐಸಿಎಂಆರ್‌ನಿಂದ ವರದಿ. ದೆಹಲಿಯಿಂದ ಐಸಿಎಂಆರ್‌ ವರದಿ ಇಂದು ಪ್ರಕಟ ಆಗುವ ನಿರೀಕ್ಷೆ ಇದೆ. ನಾನು ಕೂಡಾ ಐಸಿಎಂಆರ್‌ ಜೊತೆ ಮಾತನಾಡುತ್ತೇನೆ’ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್