ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ರಾಜ್ಯದಲ್ಲಿ ತಗ್ಗಿದ ಕೊರೋನಾ ಅಬ್ಬರ: ಇಂದು ಬೆಂಗಳೂರಿನಲ್ಲಿ 370 ಸೇರಿ 662 ಮಂದಿಗೆ ಪಾಸಿಟಿವ್, 4 ಬಲಿ!

ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಮಂಗಳವಾರ 662 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,17,571ಕ್ಕೆ ಏರಿಕೆಯಾಗಿದೆ.

ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ
Vishwanath S
Updated On : 29 Dec 2020, 8:34 pm

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಮಂಗಳವಾರ 662 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,17,571ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ನಾಲ್ಕು ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,074ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಇಂದು ಬೆಂಗಳೂರಿನಲ್ಲಿ 370 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 3,87,278ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Advertisement

Advertisement

ರಾಜ್ಯದಲ್ಲಿ ಇಂದು 1,344 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 8,93,617ಕ್ಕೆ ಏರಿಕೆಯಾಗಿದೆ. ಇನ್ನು 11,861 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 205 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement