ರಾಜ್ಯ

ಸಾಹಸಸಿಂಹ ಡಾ. ವಿಷ್ಣುವರ್ಧನ್ ಪುಣ್ಯಸ್ಮರಣೆ: ಮುಖ್ಯಮಂತ್ರಿ ಗೌರವ ನಮನ

Manjula VN

ಬೆಂಗಳೂರು: ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಪುಣ್ಯಸ್ಮರಣೆಯ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗೌರವ ನಮನ ಸಲ್ಲಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಇಂದು ಕನ್ನಡ ಚಿತ್ರರಂಗದ ಮೇರು ನಟ, ಅಭಿಮಾನಿಗಳ ಪಾಲಿನ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಪುಣ್ಯಸ್ಮರಣೆಯ ದಿನ. ತಮ್ಮ ನೂರಾರು ಉತ್ತಮ ಚಿತ್ರಗಳ ಮೂಲಕ ಕನ್ನಡಿಗರ ನೆಚ್ಚಿನ ನಟನಾಗಿಯೇ ಉಳಿದಿರುವ ಡಾ.ವಿಷ್ಣುವರ್ಧನ್ ಕನ್ನಡ ನಾಡು ನುಡಿಗಳ ಸಾಂಸ್ಕೃತಿಕ ಏಕತೆಯ ರಾಯಭಾರಿಯಾಗಿ ಜನಮಾನಸದಲ್ಲಿ ಚಿರಸ್ಥಾಯಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ಸಾಹಸಸಿಂಹ ಡಾ.ವಿಷ್ಣುವರ್ಧನ್ ಪುಣ್ಯತಿಥಿ ಹಿನ್ನೆಲೆಯಲ್ಲಿ ಶ್ರೇಷ್ಠ ಕಲಾವಿದನನ್ನು ಸಚಿವ ರಮೇಶ್ ಜಾರಕಿಹೊಳಿ‌ ಸ್ಮರಿಸಿದ್ದಾರೆ.

ಕನ್ನಡ ಚಲನಚಿತ್ರ ರಂಗದ ಧೃವತಾರೆಯಾಗಿ ಮಿಂಚಿದ ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ ಪುಣ್ಯತಿಥಿಯ ದಿನವಾದ ಇಂದು ಈ ಮೇರುನಟನನ್ನು ಗೌರವಪೂರ್ವಕವಾಗಿ ಸ್ಮರಿಸೋಣ.

ಬಹುಭಾಷಾ ತಾರೆಯಾಗಿ ಕಲಾ ರಸಿಕರ ಮನದಲ್ಲಿ ಶಾಶ್ವತ ಸ್ಥಾನ ಪಡೆದಿರುವ ಡಾ. ವಿಷ್ಣುವರ್ಧನ್ ಅವರ ಕಲಾ ಪ್ರೌಢಿಮೆ, ನಟನಾ ಶ್ರೀಮಂತಿಕೆ ಹಾಗೂ ಸರ್ವಶ್ರೇಷ್ಠ ವ್ಯಕ್ತಿತ್ವದ ಪ್ರಭಾವ ಸದಾ ಜೀವಂತವಾಗಿದೆ.

ಸಾಮಾಜಿಕ ಸಂದೇಶಗಳನ್ನು ಸಾರುವ ಚಲನಚಿತ್ರಗಳಲ್ಲಿ ನಟಿಸುವ ಮೂಲಕ ರಾಜ್ಯದ ಜನಮನಗೆದ್ದ ಡಾ. ವಿಷ್ಣುವರ್ಧನ್ ಅವರು ಇಂದಿಗೂ ನಮ್ಮ ಮನೆ, ಮನದಲ್ಲಿ ಹಚ್ಚಹಸಿರಾಗಿ ಉಳಿದಿದ್ದಾರೆ.

ಡಾ. ವಿಷ್ಣುವರ್ಧನ್ ಅವರ 11 ನೇ ಪುಣ್ಯಸ್ಮರಣೆ ಯ ಈ‌ ದಿನ‌ ಅವರ ಪಾದಪದ್ಮಗಳಿಗೆ ನನ್ನ ಪ್ರಣಾಮಗಳು ಎಂದು ರಮೇಶ್ ಜಾರಕಿಹೊಳಿ‌ ಹೇಳಿಕೆಯಲ್ಲಿ ತಿಳಿಸಿದ್ದಾರೆ.

SCROLL FOR NEXT