ಸಂಗ್ರಹ ಚಿತ್ರ 
ರಾಜ್ಯ

ಕೋವಿಡ್-19: ರಾಜ್ಯದಲ್ಲಿ ಇಂದು 973 ಹೊಸ ಸೊಂಕು ಪ್ರಕರಣಗಳು ವರದಿ

ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 973 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು. ಆ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 9,18,544ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 973 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು. ಆ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 9,18,544ಕ್ಕೆ ಏರಿಕೆಯಾಗಿದೆ.

ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ರಾಜ್ಯಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 1.03 ಲಕ್ಷ ಜನರಿಗೆ ಕೋವಿಡ್‌ ತಪಾಸಣೆ ಮಾಡಿದ್ದು, ಈ ಪೈಕಿ 973 ಜನರಲ್ಲಿ ಕೋವಿಡ್ ದೃಢಪಟ್ಟಿದೆ.ಆ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 9,18,544ಕ್ಕೆ  ಏರಿಕೆಯಾಗಿದೆ.

ಇನ್ನು ಇದೇ ಅವಧಿಯಲ್ಲಿ ಸೋಂಕಿನಿಂದ ರಾಜ್ಯದಲ್ಲಿ ಇಂದು 7 ಮಂದಿ ಮೃತಪಟ್ಟಿದ್ದು, ಆ ಮೂಲಕ ರಾಜ್ಯದಲ್ಲಿ ಕೋವಿಡ್ ಸೋಂಕಿಗೆ ಬಲಿಯಾದವರ ಸಂಖ್ಯೆ 12,081ಕ್ಕೆ ಏರಿಕೆಯಾಗಿದೆ. ಇನ್ನು ಇಂದು ರಾಜ್ಯಾದ್ಯಂತ 1,217 ಸೋಂಕಿತರು ಗುಣಮುಖರಾಗಿದ್ದು, ಸೋಂಕಿನಿಂದ ಚೇತರಿಸಿಕೊಂಡವರ ಒಟ್ಟಾರೆ ಸಂಖ್ಯೆ   8,94,834ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇನ್ನು 11,610 ಪ್ರಕರಣಗಳು ಸಕ್ರಿಯವಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇನ್ನು ಇಂದು ದಾಖಲಾದ ಒಟ್ಟಾರೆ 973 ಹೊಸ ಸೋಂಕು ಪ್ರಕರಣಗಳ ಪೈಕಿ ಬೆಂಗಳೂರು ನಗರವೊಂದರಲ್ಲೇ 554 ಪ್ರಕರಣಗಳು ದಾಖಲಾಗಿದ್ದು, ಉಳಿದಂತೆ ತುಮಕೂರಿನಲ್ಲಿ 31, ಚಿಕ್ಕಬಳ್ಳಾಪುರ 31, ದಕ್ಷಿಣ ಕನ್ನಡದಲ್ಲಿ 31, ಹಾಸನದಲ್ಲಿ 31 ಹಾಗೂ ಮೈಸೂರಿನಲ್ಲಿ 34 ಪ್ರಕರಣಗಳು ದಾಖಲಾಗಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!