ಸಾಂದರ್ಭಿಕ ಚಿತ್ರ 
ರಾಜ್ಯ

ಹೊಸ ವರ್ಷದ ಸ್ವಾಗತಕ್ಕೆ ರಾಜ್ಯ ಕರಾವಳಿ ತೀರಗಳಿಗೆ ಪ್ರವೇಶ ನಿಷೇಧ

ಕೋವಿಡ್ -19 ಹೊಸ ಸ್ವರೂಪದ ಸೋಂಕು ಹರಡುವಿಕೆ ತಡೆಯುವ ಮುನ್ನೆಚ್ಚರಿಕೆ ಕ್ರಮವಾಗಿ ಉಲ್ಲಾಳ, ಸೋಮೇಶ್ವರ, ಮೊಗವೀರ ಪಟ್ಟಣ, ಪಣಂಬೂರು, ತಣ್ಣೀರ್‍ಬಾವಿ, ಸಸಿಹಿತ್ಲು ಮತ್ತು ಸೂರತ್ಕಲ್‍ ಬೀಚ್ ಸೇರಿದಂತೆ ಕಡಲತೀರಗಳಿಗೆ....

ಮಂಗಳೂರು: ಕೋವಿಡ್ -19 ಹೊಸ ಸ್ವರೂಪದ ಸೋಂಕು ಹರಡುವಿಕೆ ತಡೆಯುವ ಮುನ್ನೆಚ್ಚರಿಕೆ ಕ್ರಮವಾಗಿ ಉಲ್ಲಾಳ, ಸೋಮೇಶ್ವರ, ಮೊಗವೀರ ಪಟ್ಟಣ, ಪಣಂಬೂರು, ತಣ್ಣೀರ್‍ಬಾವಿ, ಸಸಿಹಿತ್ಲು ಮತ್ತು ಸೂರತ್ಕಲ್‍ ಬೀಚ್ ಸೇರಿದಂತೆ ಕಡಲತೀರಗಳಿಗೆ ಡಿಸೆಂಬರ್ 31ರ ಮಧ್ಯಾಹ್ನದಿಂದ ಜನವರಿ 2ರ ಮಧ್ಯಾಹ್ನದವರೆಗೆ ಸಾರ್ವಜನಿಕರು ಮತ್ತು ಪ್ರವಾಸಿಗರ ಪ್ರವೇಶವನ್ನು ಜಿಲ್ಲಾಡಳಿತ ನಿಷೇಧಿಸಿದೆ.

ಆದರೆ, ಸಾಂಪ್ರದಾಯಿಕ ಮೀನುಗಾರರಿಗೆ ನಿಷೇಧದಿಂದ ವಿನಾಯಿತಿ ನೀಡಲಾಗಿದೆ. ವಿಶೇಷವಾಗಿ ಹೊಸ ವರ್ಷದ ಮುನ್ನಾದಿನದಂದು ಕಡಲತೀರಗಳಿಗೆ ಜನರ ಹರಿವು ತಡೆಯಲು ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ.

ಚಾಮರಾಜನಗರ ಜಿಲ್ಲೆಯಲ್ಲಿ, ಡಿ 31 ಮತ್ತು ಜನವರಿ 1 ರಂದು ಜನಸಾಮಾನ್ಯರು ಮತ್ತು ಪ್ರವಾಸಿಗರು ಜಲಮೂಲಗಳಿಗೆ ಪ್ರವೇಶಿಸುವುದನ್ನು ಅಧಿಕಾರಿಗಳು ನಿಷೇಧಿಸಿದ್ದಾರೆ.

ಕರ್ನಾಟಕ ಸಾಂಕ್ರಾಮಿಕ ರೋಗಗಳ ಕೋವಿಡ್‍ -19 ನಿಯಂತ್ರಣ 2020 ಮತ್ತು ಸಿಆರ್‌ಪಿಸಿಯ ಸೆಕ್ಷನ್ 144(3)ರ ಅಡಿ ಕೊಳ್ಳೇಗಾಲ ತಾಲ್ಲೂಕಿನ ಭರಚುಕ್ಕಿ, ಹನೂರು ತಾಲ್ಲೂಕಿನ ಹೊಗೇನಕಲ್‍ ಜಲಪಾತಗಳು, ಚಾಮರಾಜನಗರ ತಾಲ್ಲೂಕಿನ ಚಿಕ್ಕಹೊಳೆ-ಸುವರ್ಣಾವತಿ ಜಲಾಶಯದಿಂದ 5 ಕಿ.ಮೀ ವ್ಯಾಪ್ತಿಯಲ್ಲಿ ಪ್ರವಾಸಿಗರ ಪ್ರವೇಶ ನಿಷೇಧಿಸಿ ಚಾಮರಾಜನಗರ ಜಿಲ್ಲಾಧಿಕಾರಿ ಎಂ.ಆರ್.ರವಿ ಆದೇಶ ಹೊರಡಿಸಿದ್ದಾರೆ.

ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಜಲಮೂಲಗಳಲ್ಲಿ ಸೇರುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕೋವಿಡ್‍ -19 ಹರಡುವಿಕೆ ತಡೆಗಟ್ಟಲು ಈ ನಿರ್ಬಂಧಗಳನ್ನು ಹೇರಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT