ರಾಜ್ಯ

ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಆಸ್ಪತ್ರೆಯಿಂದ ಡಿಸ್ಚಾರ್ಜ್

Raghavendra Adiga

ಬೆಂಗಳೂರು: ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸೊಂಟದ ಮೂಳೆ ಮುರಿತದಿಂದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ತಿಮ್ಮಕ್ಕ ಗುಣಮುಖರಾಗಿ 24 ದಿನದ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಡಿಸೆಂಬರ್ 6ರಂದು ತಿಮ್ಮಕ್ಕ ಮನೆಯಲ್ಲೇ ಕುಸಿದು ಬಿದ್ದು ಸೊಂಟದ ಮೂಳೆ ಮುರಿದಿತ್ತು. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳುರಿನ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಸಧ್ಯ ತಿಮ್ಮಕ್ಕ ಸಂಪೂರ್ಣ ಗುಣಮುಖರಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

SCROLL FOR NEXT