ಬೈಕ್ ಸವಾರನ ಮೇಲೆ ಹಲ್ಲೆ: ಬಿಎಂಟಿಸಿ ಚಾಲಕ ಸೇವೆಯಿಂದ ಅಮಾನತು
ರಸ್ತೆಯಲ್ಲಿ ಬೈಕ್ ಸವಾರನ ಮೇಲೆ ಹಲ್ಲೆ ಮಾಡಿದ ಆರೋಪಕ್ಕೆ ಸಂಬಂಧಪಟ್ಟಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ ಚಾಲಕನನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಬೆಂಗಳೂರು: ರಸ್ತೆಯಲ್ಲಿ ಬೈಕ್ ಸವಾರನ ಮೇಲೆ ಹಲ್ಲೆ ಮಾಡಿದ ಆರೋಪಕ್ಕೆ ಸಂಬಂಧಪಟ್ಟಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ ಚಾಲಕನನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಬಿಎಂಟಿಸಿಯ ಡಿಪೊ ಸಂಖ್ಯೆ 28ರ ಚಾಲಕ ಸಂತೋಷ್ ಬಡಿಗೇರ್ ರಸ್ತೆ ಮೇಲೆ ಬೈಕ್ ಸವಾರನ ಮೇಲೆ ಹಲ್ಲೆ ಮಾಡಿದ್ದ ವಿಡಿಯೊ ಸೋಷಿಯನ್ ಮೀಡಿಯಾಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿತ್ತು.
ವಿಡಿಯೊ ವೈರಲ್ ಆಗಿ ಸುದ್ದಿಯಾಗುತ್ತಿದ್ದಂತೆ ವಿಷಯ ಗಂಭೀರವಾಗಿ ಪರಿಗಣಿಸಿದ ಇಲಾಖೆ ಚಾಲಕನನ್ನು ವಜಾ ಮಾಡಿದೆ. ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ ಎಂದು ಬಿಎಂಟಿಸಿ ಸಾರ್ವಜನಿಕ ಸಂಪರ್ಕಾಧಿಕಾರಿ ಅಜಿತ್ ತೊರಗಲ್ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.