ವಿದ್ಯುತ್ ತಂತಿ ತಗುಲಿ ಲಾರಿ ಸುಟ್ಟು ಭಸ್ಮ.!
ವಿದ್ಯುತ್ ತಂತಿ ತಗುಲಿ ಕಬ್ಬಿನ ಸಿಪ್ಪೆ ತುಂಬಿಕೊಂಡು ಹೋಗುತ್ತಿದ್ದ ಲಾರಿ ಸುಟ್ಟು ಭಸ್ಮವಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಬಳ್ಳೆಕೆರೆ ಸಮೀಪ ನಡೆದಿದೆ
ಮಂಡ್ಯ: ವಿದ್ಯುತ್ ತಂತಿ ತಗುಲಿ ಕಬ್ಬಿನ ಸಿಪ್ಪೆ ತುಂಬಿಕೊಂಡು ಹೋಗುತ್ತಿದ್ದ ಲಾರಿ ಸುಟ್ಟು ಭಸ್ಮವಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಬಳ್ಳೆಕೆರೆ ಸಮೀಪ ನಡೆದಿದೆ
ಇಂದು ಮಧ್ಯಾಹ್ನ ಕಬ್ಬಿನ ಸಿಪ್ಪೆಯನ್ನು ಲಾರಿಯಲ್ಲಿ ತುಂಬಿಕೊಂಡು ಮೈಸೂರು ಕಡೆಗೆ ಬರುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದ್ದು,ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಚಾಲಕ ಮತ್ತು ಕ್ಲೀನರ್ ಲಾರಿಯಿಂದ ಜಿಗಿದು ಅಪಾಯದಿಂದ ಪಾರಾಗಿದ್ದಾರೆ.
ಗ್ರಾಮಸ್ಥರ ಸಹಾಯದಿಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರೂ ಲಾರಿ ಸಂಪೂರ್ಣ ಸುಟ್ಟು ಹೋಗಿದೆ ಎನ್ನಲಾಗಿದೆ ಈ ಸಂಬಂಧ ಕೆ.ಆರ್.ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪರಿಹಾರಕ್ಕೆ ಆಗ್ರಹ; ಇನ್ನು ಇಂತಹ ಅವಘಡಗಳು ತಾಲೂಕಿನಲ್ಲಿ ನಡೆಯುತ್ತಿದ್ದು,ಅವುಗಳನ್ನು ತಡೆಯಲು ಸೂಕ್ತ ಕ್ರಮಕೈಗೊಳ್ಳಬೇಕು, ವಿದ್ಯುತ್ ಅವಘಡದ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಸ್ಥಳಿಯರು ಒತ್ತಾಯ ಮಾಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.