ಸಚಿವ ಮಾಧುಸ್ವಾಮಿ, ಶಾಸಕ ಇ. ತುಕಾರಾಂ ಮತ್ತಿತರರು 
ರಾಜ್ಯ

ಕೆರೆಗಳ ಅಭಿವೃದ್ಧಿಯಲ್ಲಿ ಇಡೀ ರಾಜ್ಯಕ್ಕೆ ಸಂಡೂರು ಮಾದರಿ: ಶಾಸಕ ತುಕಾರಾಂ

ಸಂಡೂರು ತಾಲೂಕಿನಲ್ಲಿರುವ ಎಲ್ಲ ಕೆರೆಗಳನ್ನು ಅಭಿವೃದ್ಧಿಪಡಿಸುವುದರ ಮೂಲಕ ಇಡೀ ರಾಜ್ಯದಲ್ಲಿಯೇ ಅತ್ಯಂತ ಮಾದರಿ ತಾಲೂಕ್ ಆಗಿ ಮಾಡಲಾಗುವುದು ಎಂದು ಶಾಸಕ ಈ.ತುಕಾರಾಂ ಭರವಸೆ ನೀಡಿದ್ದಾರೆ

ಹೊಸಪೇಟೆ: ಸಂಡೂರು ತಾಲೂಕಿನಲ್ಲಿರುವ ಎಲ್ಲ ಕೆರೆಗಳನ್ನು ಅಭಿವೃದ್ಧಿಪಡಿಸುವುದರ ಮೂಲಕ ಇಡೀ ರಾಜ್ಯದಲ್ಲಿಯೇ ಅತ್ಯಂತ ಮಾದರಿ ತಾಲೂಕ್ ಆಗಿ ಮಾಡಲಾಗುವುದು ಎಂದು ಶಾಸಕ ಈ.ತುಕಾರಾಂ ಭರವಸೆ ನೀಡಿದ್ದಾರೆ

ಹೊಸಪೇಟೆಯ ಕೃಷ್ಣ ಪ್ಯಾಲೇಸ್ ಹೋಟಲ್ ಸಭಾಂಗಣದಲ್ಲಿ ಭಾನುವಾರ ನಡೆದ ರಾಜ್ಯದ ಕೆರೆಗಳನ್ನು ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಅಡಿ(ಸಿಎಸ್ಆರ್) ಅಭಿವೃದ್ಧಿಪಡಿಸಲು ಕಾರ್ಪೋರೆಟ್ ಸಂಸ್ಥೆಗಳೊಂದಿಗೆ ಹಾಗೂ ಉದ್ಯಮಿಗಳೊಂದಿಗೆ ಪೂರ್ವಭಾವಿ ಸಭೆಯಲ್ಲಿ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು

ಸಂಡೂರು ತಾಲೂಕಿನಲ್ಲಿ ಸಣ್ಣ ನೀರಾವರಿ ಇಲಾಖೆ‌ ವ್ಯಾಪ್ತಿ ಅಡಿ 18ಕೆರೆಗಳು ಹಾಗೂ ಜಿಪಂ ಅಡಿ 41ಕೆರೆಗಳು ಬರುತ್ತಿದ್ದು,ಅವುಗಳನ್ನು ಕಾರ್ಪೊರೇಟ್ ಸಂಸ್ಥೆಗಳು ಹಾಗೂ ಉದ್ಯಮಿಗಳ ಸಹಾಯ,ಸಹಕಾರ ಪಡೆದು ಇಡೀ ರಾಜ್ಯದಲ್ಲಿಯೇ ಅತ್ಯುತ್ತಮವಾಗಿ ಅಭಿವೃದ್ಧಿಪಡಿಸಲಾಗುವುದು ಎಂದರು. ರಾಜ್ಯ ಸರಕಾರ ಕೈಗೆತ್ತಿಕೊಂಡಿರುವ ಈ ಯೋಜನೆಗೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದರು

ಸಂಸದ ವೈ.ದೇವೇಂದ್ರಪ್ಪ  ಮಾತನಾಡಿ, ಈ ಯೋಜನೆಗೆ ಸಹಕರಿಸಬೇಕು, ತಮ್ಮ ವ್ಯಾಪ್ತಿಯಲ್ಲಿನ ಕೆರೆಗಳ ಅಭಿವೃದ್ಧಿಗೆ ಮುಂದಾಗಬೇಕು ಎಂದು‌ ಮನವಿ ಮಾಡಿದರು.ಜಿಲ್ಲೆಯಲ್ಲಿರುವ ಎಲ್ಲ ಕೆರೆಗಳನ್ನು ಭರ್ತಿ ಮಾಡಿಸಲಾಗುವುದು ಎಂದರು‌.

ಈ ಸಂದರ್ಭದಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳಾದ ಮೃತ್ಯುಂಜಯ ಸ್ವಾಮಿ, ಕಾರ್ಪೋರೇಟ್ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಉದ್ಯಮಿಗಳು ಇದ್ದರು.

ವರದಿ: ಸುಬಾನಿ ಪಿಂಜರ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Mekedatu row: ಕರ್ನಾಟಕದ DPR ತಿರಸ್ಕರಿಸಿ; ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಮನವಿ

ಜನಸಂಖ್ಯಾ ಬದಲಾವಣೆ ಪರಿಶೀಲಿಸಲು ಸರ್ಕಾರದಿಂದ ಉನ್ನತ ಮಟ್ಟದ ಸಮಿತಿ

ಬೆಂಗಳೂರು: ಕೆಲಸ ಮಾಡುತ್ತಿದ್ದ ಕಂಪನಿಗೆ ಕನ್ನ! ಚಿನ್ನದ ಗಟ್ಟಿ, ಆಭರಣಗಳನ್ನು ಕದ್ದ 9 ಕಾರ್ಮಿಕರ ಬಂಧನ

IPL 2026: ನಾವೇನು ಸಿನಿಮಾ ಸ್ಟಾರ್‌ಗಳಲ್ಲ: ವಿಮಾನ ನಿಲ್ಗಾಣದಲ್ಲಿ Riyan Parag ಗರಂ, ವೈಭವ್ ಸೂರ್ಯವಂಶಿ ಶಾಕ್! Video

SCROLL FOR NEXT