ವೀರಪ್ಪನ್ ಸಹಚರನ ಪತ್ನಿ 
ರಾಜ್ಯ

27 ವರ್ಷದ ಬಳಿಕ ವೀರಪ್ಪನ್ ಸಹಚರನ ಪತ್ನಿ ಅಂದರ್: ವಿಚಾರಣೆ ವೇಳೆ ಈಕೆ ಹೇಳಿದ್ದೇನು?

ಮೂರು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಕಾಡುಗಳ್ಳ ವೀರಪ್ಪನ್ ಸಹಚರನ ಪತ್ನಿಯನ್ನು ಕೊಳ್ಳೇಗಾಲ ಅಪರಾಧ ಪತ್ತೆ ವಿಭಾಗ ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಚಾಮರಾಜನಗರ: ಮೂರು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಕಾಡುಗಳ್ಳ ವೀರಪ್ಪನ್ ಸಹಚರನ ಪತ್ನಿಯನ್ನು ಕೊಳ್ಳೇಗಾಲ ಅಪರಾಧ ಪತ್ತೆ ವಿಭಾಗ ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮದ ಸ್ಟೆಲ್ಲಾ ಅಲಿಯಾಸ್ ಸ್ಟೆಲ್ಲಾಮೇರಿ ಬಂಧಿತ ಆರೋಪಿ. ಪಾಲಾರ್ ಬಾಂಬ್ ಸ್ಫೋಟ ಪ್ರಕರಣ ಸೇರಿದಂತೆ ಅಕ್ರಮ ಶಸ್ತ್ರಾಸ್ತ್ರ ಹೊತ್ತೊಯ್ದ ಆರೋಪ ಈಕೆ ಮೇಲಿದೆ. ಈಕೆ ವೀರಪ್ಪನ್ ಗುಂಪಿಗೆ ಬಲವಂತವಾಗಿ ಸೇರಿಕೊಂಡಾಗ 13 ರ ಬಾಲಕಿಯಾಗಿದ್ದಳು ಎಂದು ಮೂಲಗಳು ತಿಳಿಸಿವೆ.

ಕಾಡುಗಳ್ಳ ವೀರಪ್ಪನ್ ಹುದುಗಿಸಿಟ್ಟಿದ್ದ ಹಣವನ್ನು ಸ್ಟೆಲ್ಲಾಳ ಭಾವ ಶೇಷರಾಜ್ ಲಪಟಾಯಿಸಿದ್ದನಂತೆ. ಈ ವಿಚಾರ ತಿಳಿದ ವೀರಪ್ಪನ್​, ಶೇಷರಾಜ್ ಸೇರಿದಂತೆ ಸ್ಟೆಲ್ಲಾಳನ್ನು ಅಪಹರಿಸಿ ತನ್ನ ಹಣ ಕೊಡುವಂತೆ ತಾಕೀತು ಮಾಡಿದ್ದ. ಇದಕ್ಕೆ ಶೇಷರಾಜ್ ಕೂಡ ಒಪ್ಪಿದ್ದ. ಆ ವೇಳೆ, ವೀರಪ್ಪನ್ ಸಹಚರನಾದ ಸುಂಡ ಅಲಿಯಾಸ್ ವೆಲ್ಲೆಯನ್ ಸ್ಟೆಲ್ಲಾ ಮೇಲೆ ಮೋಹಗೊಂಡು ಬಲವಂತವಾಗಿ ವಿವಾಹ ಮಾಡಿಕೊಂಡಿದ್ದ.

ಒಂದೂವರೆ ವರ್ಷ ವೀರಪ್ಪನ್ ತಂಡದಲ್ಲೇ ಇದ್ದ ಸ್ಟೆಲ್ಲಾ, ಪಾಲಾರ್ ಬಾಂಬ್ ಸ್ಫೋಟ, ರಾಮಾಪುರ ಠಾಣೆಗೆ ಬೆಂಕಿ, ಶಸ್ತ್ರಾಸ್ತ್ರ ಹೊತ್ತೊಯ್ದ ಪ್ರಕರಣದ ಆರೋಪ ಹೊತ್ತಿದ್ದು, ಟಾಡಾ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video