ರಾಜ್ಯ

ಕೋರಮಂಗಲದಲ್ಲಿ ವೇಶ್ಯಾವಾಟಿಕೆ ದಂಧೆ: ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದ ಶಾಸಕ ರಾಮಲಿಂಗಾ ರೆಡ್ಡಿ

Manjula VN

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಧಿಕೃತವಾಗಿ ಕಾನೂನು ಬಾಹಿರವಾಗಿ ಎಗ್ಗಿಲ್ಲದೆ ಆನ್'ಲೈನ್ ಮಾಂಸ ದಂಧೆ ನಡೆಯುತ್ತಿದ್ದು, ಇದರ ವಿರುದ್ಧ ಕಡಿವಾಣ ಹಾಕುವಂತೆ ಪೊಲೀಸ್ ಮಹಾ ನಿರ್ದೇಶಕರಿಗೆ ಮಾಜಿ ಗೃಹ ಸಚಿವ ಹಾಗೂ ಶಾಸಕ ರಾಮಲಿಂಗಾರೆಡ್ಡಿಯವರು ಪತ್ರ ಬರೆದು ಒತ್ತಾಯಿಸಿದ್ದಾರೆ. 

ಕೋರಮಂಗಲ ಅಫಿಶಿಯಲ್ ವೆಬ್ ಸೈಟ್ ವೊಂದರ ಮೂಲಕ ಹುಡುಗಿಯರ ಫೋಟೋ ಹಾಕುತ್ತಿದ್ದು, ಮಸಾಜ್ ಸೆಂಟರ್ ಹಾಗೂ ಸ್ಪಾ ಹೆಸರಿನಲ್ಲಿ ಕಾನೂನು ಬಾಹಿರವಾಗಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಾರೆ. ಶೀಘ್ರಗತಿಯಲ್ಲಿ ಇಂತಹುದ್ದರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪತ್ರದಲ್ಲಿ ತಿಳಿಸಿದ್ದಾರೆ. 

ಪತ್ರ ಹಿನ್ನೆಲೆಯಲ್ಲಿ ಪ್ರಕರಣವದನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಕೋರಮಂಗಲದ ಹಲವು ವೇಶ್ಯಾವಾಟಿಕೆ ಮನೆಗಳ ಮೇಲೆ ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ. 

ಕಳೆದ ವಾರವಷ್ಟೇ ಈಜಿಪುರದಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ದಾಳಿ ನಡೆಸಲಾಗಿದ್ದು, 6 ಮಂದಿ ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ. ಇದಷ್ಟೇ ಅಲ್ಲದೆ ಕೋರಮಂಗಲದ ಠಾಣಾ ವ್ಯಾಪ್ತಿಗೆ ಬರುವ ಪ್ರದೇಶಗಳಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಮನೆಗಳ ಮೇಲೂ ದಾಳಿ ನಡೆಸಿದ್ದಾರೆಂದು ವರದಿಗಳು ತಿಳಿಸಿವೆ. 

ಇತ್ತೀಚಿನ ದಿನಗಳಲ್ಲಿ ವೇಶ್ಯಾವಾಟಿಕೆಗೆ ಇಂಟರ್ನೆಟ್ ಬಳಕೆ ಮಾಡುವುದು ಹೆಚ್ಚಾಗಿದೆ. ಆನ್ ಲೈನ್ ಮೂಲಕ ಮಹಿಳೆಯರ ಫೋಟೋಗಳನ್ನು ಹಾಕಲಾಗುತ್ತಿದ್ದು, ಆಸೆಗಳನ್ನು ತೋರಿಸಲಾಗುತ್ತಿದೆ. ವೆಬ್ ಸೈಟ್ ಗಳಿಗೆ ಬಂದು ಫೋನ್ ನಂಬರ್ ಹಂಚಿಕೊಳ್ಳುವಂತಹ ಜನರಿಗೆ ಸಂದೇಶಗಳನ್ನು ರವಾನಿಸುತ್ತಿದ್ದಾರೆ. ಇಂತಹ ಆಮಿಷಗಳಿಗೆ ಒಳಗಾಗುವ ಜನರನ್ನು ದರೋಡೆ ಮಾಡಿರುವ ಪ್ರಕರಣಗಳೂ ಕೂಡ ಬೆಳಕಿಗೆ ಬಂದಿವೆ. ಈ ಕುರಿತು ಹಲವು ದೂರಗಳೂ ಕೂಡ ದಾಖಲಾಗಿವೆ. ಸ್ಥಳೀಯ ಪೊಲೀಸರಿಂದ ಮಾಹಿತಿ ಪಡೆದು, ಇಂತಹ ಪ್ರಕರಣಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

SCROLL FOR NEXT