ಶಿವಾಜಿನಗರ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಪ್ರಮಾಣ ವಚನ ಸ್ವೀಕಾರ 
ರಾಜ್ಯ

ಶಿವಾಜಿನಗರ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಪ್ರಮಾಣ ವಚನ ಸ್ವೀಕಾರ

ಉಪಚುನಾವಣೆಯಲ್ಲಿ ಶಿವಾಜಿನಗರ ಕ್ಷೇತ್ರದ ಶಾಸಕರಾಗಿ ಗೆಲುವು ಸಾಧಿಸಿರುವ ಕಾಂಗ್ರೆಸ್‌ನ ರಿಝ್ವಾನ್ ಅರ್ಷದ್ ಸೋಮವಾರ ನೂತನ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು. 

ಬೆಂಗಳೂರು: ಉಪಚುನಾವಣೆಯಲ್ಲಿ ಶಿವಾಜಿನಗರ ಕ್ಷೇತ್ರದ ಶಾಸಕರಾಗಿ ಗೆಲುವು ಸಾಧಿಸಿರುವ ಕಾಂಗ್ರೆಸ್‌ನ ರಿಝ್ವಾನ್ ಅರ್ಷದ್ ಸೋಮವಾರ ನೂತನ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ವಿಧಾನಸಭೆ ಸ್ಪೀಕರ್ ಕಚೇರಿಯಲ್ಲಿ ನಡೆದ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ನೂತನ ಶಾಸಕರಿಗೆ ಪ್ರಮಾಣ ವಚನ ಬೋಧಿಸಿದರು. ರಿಝ್ವಾನ್ ಅರ್ಷದ್ ಸತ್ಯ ಮತ್ತು ನಿಷ್ಠೆ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಚಿವ ಕೃಷ್ಣ ಬೈರೇಗೌಡ, ಶಾಸಕ ಎನ್‌.ಎ. ಹ್ಯಾರೀಸ್ ಮತ್ತು ರಿಝ್ವಾನ್ ಅರ್ಷದ್ ಅವರ ಕುಟುಂಬದ ಸದಸ್ಯರು ಹಾಜರಿದ್ದರು‌

ಶಿವಾಜಿನಗರ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಶಾಸಕರಾಗಿದ್ದ ರೋಷನ್ ಬೇಗ್‌ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಈ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿತ್ತು. ಆದರೆ  ಉಪ ಚುನಾವಣೆಯಲ್ಲಿ ರೋಷನ್ ಬೇಗ್‌ ಅವರಿಗೆ ಬಿಜೆಪಿ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಅವರು ಸ್ಪರ್ಧಿಸಿರಲಿಲ್ಲ. ಬಿಜೆಪಿ ಶರವಣ ಅವರಿಗೆ ಟಿಕೆಟ್ ನೀಡಿತ್ತು. ಆದರೆ ಚುನಾವಣೆಯಲ್ಲಿ ವಿಧಾನ ಪರಿಷತ್ ಸದಸ್ಯರೂ ಆಗಿರುವ ರಿಜ್ವಾನ್ ಅರ್ಷದ್ ಗೆಲುವು ಪಡೆದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!