ಬಿ. ಶ್ರೀರಾಮುಲು 
ರಾಜ್ಯ

ಕೊರೋನಾ ವೈರಸ್ ಹರಡದಂತೆ ಮುಂಜಾಗೃತಾ ಕ್ರಮ: ಆರೋಗ್ಯ ಸಚಿವ ಶ್ರೀರಾಮುಲು

ಕೊರೋನೂ ವೈರಸ್ ಹರಡದಂತೆ ರಾಜ್ಯದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ರಾಜ್ಯಕ್ಕೆ ವಿದೇಶದಿಂದ ಬಂದ 44 ಮಂದಿ ಪ್ರವಾಸಿಗರ ರಕ್ತ ಪರೀಕ್ಷೆ ಮಾಡಲಾಗಿದೆ. ಇದರಲ್ಲಿ 29 ಮಂದಿಯ ರಕ್ತದಲ್ಲಿ ಕೆರೋನ್ ಶಂಕೆ ಇಲ್ಲ ಎಂಬ ವರದಿ ಬಂದಿದೆ.

ಮೈಸೂರು: ಕೊರೋನೂ ವೈರಸ್ ಹರಡದಂತೆ ರಾಜ್ಯದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ರಾಜ್ಯಕ್ಕೆ ವಿದೇಶದಿಂದ ಬಂದ 44 ಮಂದಿ ಪ್ರವಾಸಿಗರ ರಕ್ತ ಪರೀಕ್ಷೆ ಮಾಡಲಾಗಿದೆ. ಇದರಲ್ಲಿ 29 ಮಂದಿಯ ರಕ್ತದಲ್ಲಿ ಕೆರೋನ್ ಶಂಕೆ ಇಲ್ಲ ಎಂಬ ವರದಿ ಬಂದಿದೆ. ಉಳಿದವರ ರಕ್ತ ಪರೀಕ್ಷೆ ನಡೆಯುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಂಕು ಹರಡದಂತೆ ರಾಜ್ಯದಲ್ಲಿ ಮುಂಜಾಗ್ರತಾ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಪ್ರತ್ಯೇಕ ವಾರ್ಡ್ ತೆರೆಯಲಾಗಿದೆ‌.  ಹತ್ತು ಹಾಸಿಗೆಯುಳ್ಳ ವಾರ್ಡ್‌ಗಳನ್ನು ಸಿದ್ಧಪಡಿಸಲಾಗಿದೆ. ಇದುವರೆಗೂ ರಾಜ್ಯದಲ್ಲಿ ಒಂದು ಕೆರೋನೂ ಪ್ರಕರಣ ದಾಖಲಾಗಿಲ್ಲ.  ಇದಕ್ಕೆ ಔಷಧಿಯನ್ನು ಹೊರ ದೇಶದಲ್ಲಿ ತರಿಸಲು ಸಿದ್ಧರಿದ್ದೇವೆ‌.  ರೋಗಿಗಳ ಚಿಕಿತ್ಸಾ ವೆಚ್ಚ ಭರಿಸಲು ಸರ್ಕಾರ ಸಿದ್ಧವಿದೆ‌. ಈ ರೋಗಕ್ಕೆ ಆಯುರ್ವೇದದಲ್ಲಿ ಔಷಧವಿದೆ. ವಿಮಾನ ನಿಲ್ದಾಣಗಳಿಗೆ ಚೀನಾದಿಂದ ಬರುವ ಪ್ರವಾಸಿಗರಿಗೆ ಸ್ಪ್ರೇ ಮಾಡಿ  ಬರಮಾಡಿಕೊಳ್ಳಲಾಗುತ್ತಿದೆ. ಈ ವೈರಸ್ ಬಗ್ಗೆ ಯಾರು ಆತಂಕ ಪಡಬೇಕಾಗಿಲ್ಲ ಸಚಿವ ಶ್ರಿರಾಮುಲು ಹೇಳಿದರು.

ಉಪ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ನಾನು ಮಾತನಾಡುವುದಿಲ್ಲ. ಈಗ ಅದರ ಬಗ್ಗೆ ಮಾತನಾಡಿ ಪಕ್ಷಕ್ಕೆ, ನಾಯಕರಿಗೆ ಮುಜುಗರ ತರಲು ಬಯಸುವುದಿಲ್ಲ. ನಾನು ರಾಷ್ಟ್ರೀಯ ಪಕ್ಷದಲ್ಲಿ ಇರುವವನು.  ಪಕ್ಷದ ವರಿಷ್ಠರು ತಗೆದುಕೊಳ್ಳುವ ಕ್ರಮಕ್ಕೆ ನಾನು ಬದ್ಧನಾಗಿರುತ್ತೇನೆ.ನಮ್ಮಲ್ಲಿ ಯಾವುದೆ ಭಿನ್ನಾಭಿಪ್ರಾವಿಲ್ಲ. ನಾವೆಲ್ಲರು ಒಗ್ಗಟ್ಟಿನಿಂದ‌ ಇದ್ದೇವೆ ಎಂದು ಶ್ರೀರಾಮುಲು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್

ಶಾಕಿಂಗ್ Video: CJP ಪ್ರತಿಭಟನೆ ತಡೆಯಲು ಬ್ಯಾರಿಕೇಡ್‌ ಮಾತ್ರವಲ್ಲ, ರಸ್ತೆಯಲ್ಲಿ ಸ್ಪೈಕ್ ಸ್ಟ್ರಿಪ್‌ ಅಳವಡಿಕೆ!