ರಾಜ್ಯ

ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವ "ಜನಸೇವಕ" ಯೋಜನೆಗೆ ಮುಖ್ಯಮಂತ್ರಿ ಚಾಲನೆ

Nagaraja AB

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜನಸ್ನೇಹಿ ಸಹಾಯ ವೇದಿಕೆ, ಕಾರ್ಮಿಕ ಇಲಾಖೆಯ ಆಶಾದೀಪ ಯೋಜನೆ, ಸಕಾಲ ಮಿಷನ್ ಭಾಗವಾದ ಜನಸೇವಕ ಯೋಜನೆ  ಹಾಗೂ ಮಾಹಿತಿ ಹಕ್ಕಿನ ಆನ್‌ಲೈನ್ ಸೇವೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಚಾಲನೆ ನೀಡಿದರು

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಲ್ಕು ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿ, ಹೊಸ ಸೇವೆಗಳನ್ನು ಜನ ಸಾಮಾನ್ಯರು ಸದುಪಯೋಗ ಮಾಡಿಕೊಳ್ಳಬೇಕು. ಸರ್ಕಾರಿ ಸೇವೆಗಳನ್ನು ಮನೆ ಮನೆಗೆ ತಲುಪಿಸುವ ಹೊಸ ಕಾರ್ಯಕ್ರಮ ಇದಾಗಿದೆ ಎಂದರು.

ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯವು ಸಿದ್ಧಪಡಿಸಿರುವ ಕರ್ನಾಟಕ ಅಂಕಿಅಂಶಗಳ ನೋಟ 2018-19ನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇದೇ ಸಂದರ್ಭದಲ್ಲಿ ಲೋಕಾರ್ಪಣೆ ಮಾಡಿದರು

SCROLL FOR NEXT