ಮುಖ್ಯಪೇದೆ ಭಕ್ತರಾಮ್ 
ರಾಜ್ಯ

ರಸ್ತೆ ವಿಭಜಕಕ್ಕೆ ಲಾರಿ ಡಿಕ್ಕಿ: ಬೈಕ್ ನಲ್ಲಿ ಹೋಗುತ್ತಿದ್ದ ಪೊಲೀಸ್ ಪೇದೆ ದುರ್ಮರಣ

ಕಳೆದ ರಾತ್ರಿ ನಡೆದ ರಸ್ತೆ ಅಪಘಾತವೊಂದರಲ್ಲಿ ನಂದಿನಿ ಲೇಔಟ್ ಪೊಲೀಸ್ ಠಾಣೆಯ ಮುಖ್ಯಪೇದೆ ಭಕ್ತರಾಮ್ ಎಂಬವರು ಮೃತಪಟ್ಟಿದ್ದಾರೆ

ಬೆಂಗಳೂರು: ಕಳೆದ ರಾತ್ರಿ ನಡೆದ ರಸ್ತೆ ಅಪಘಾತವೊಂದರಲ್ಲಿ ನಂದಿನಿ ಲೇಔಟ್ ಪೊಲೀಸ್ ಠಾಣೆಯ ಮುಖ್ಯಪೇದೆ ಭಕ್ತರಾಮ್ ಎಂಬವರು ಮೃತಪಟ್ಟಿದ್ದಾರೆ

ಭಕ್ತ ರಾಮ್ ಕಳೆದ ರಾತ್ರಿ ಯಶವಂತಪುರದ ಎಂಇಎಸ್ ರಿಂಗ್ ರಸ್ತೆಯಲ್ಲಿ ದ್ವಿ ಚಕ್ರವಾಹನದಲ್ಲಿ ಹೋಗುತ್ತಿದ್ದಾಗ, ಲಾರಿಯೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ

 ಡಿಕ್ಕಿಯ ರಭಸಕ್ಕೆ ರಸ್ತೆ ವಿಭಜಕದಿಂದ ಎಗರಿದ ಸಿಮೆಂಟ್ ಬ್ಲಾಕೊಂದು ರಾಮ್ ಅವರಿಗೆ ಬಡಿದಿದೆ. ತಕ್ಷಣ ರಸ್ತೆಗೆ ಉರುಳಿದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮುಂಜಾನೆ ಮೃತಪಟ್ಟಿದ್ದಾರೆ.

ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಮುಖ್ಯಪೇದೆಯಾಗಿ  ಕೆಲಸ ಮಾಡುತ್ತಿದ್ದ ಭಕ್ತರಾಮ್‌ಗೆ ಇಬ್ಬರು ಮಕ್ಕಳಿದ್ದು ಮಗಳು ಬಿಎಸ್‌ಸಿ  ಓದುತ್ತಿದ್ದರೆ ಪುತ್ರ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!