ಸಮ್ಮೇಳನದ ವೇದಿಕೆ 
ರಾಜ್ಯ

ಕಲಬುರಗಿ: 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಮೇಲೆ ರಾಜಕೀಯದ ಕರಿನೆರಳು

ಗುರುವಾರ ರಾಜ್ಯ ಬಿಜೆಪಿ ಸರ್ಕಾರದ ಸಂಪುಟ ವಿಸ್ತರಣೆ ಹಾಗೂ ಪ್ರಮಾಣ ವಚನ ಸಮಾರಂಭವಿದೆ, ಹೀಗಾಗಿ ಕಲಬುರಗಿಯಲ್ಲಿ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.

ಕಲಬುರಗಿ:  ಗುರುವಾರ ರಾಜ್ಯ ಬಿಜೆಪಿ ಸರ್ಕಾರದ ಸಂಪುಟ ವಿಸ್ತರಣೆ ಹಾಗೂ ಪ್ರಮಾಣ ವಚನ ಸಮಾರಂಭವಿದೆ, ಹೀಗಾಗಿ ಕಲಬುರಗಿಯಲ್ಲಿ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.

ಸಾಹಿತ್ಯ ರಂಗದ ಮೇಲೆ ರಾಜಕೀಯದ ಬೆಳವಣಿಗೆಗಳು ಪರಿಣಾಮ ಬೀರುವ ಸಾಧ್ಯತೆಯಿದೆ. ಮಾಧ್ಯಮಗಳು ರಾಜಕೀಯ ಬೆಳವಣಿಗೆಗಳ ಕುರಿತು ವರದಿ ಮಾಡಲು ಬೆಂಗಳೂರಿನ ಮೇಲೆ ತಮ್ಮ ಗಮನ ಕೇಂದ್ರೀಕರಿಸುವ ಕಾರಣ ಸಾಹಿತ್ಯ ಸಮ್ಮೇಳನದ ಬಗ್ಗೆ ಹೆಚ್ಚಿನ ವರದಿ ಮಾಡುವುದಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ.

ಮೂರು ದಿನಗಳ ಕಾಲ ನಡೆಯುವ ಸಾಹಿತ್ಯ ಸಮ್ಮೇಳನದ ಸಂಪೂರ್ಣ ಕವರೇಜ್ ಮಾಡಲು ಕೆಲ ಸುದ್ದಿ ಚಾನಲ್ ಗಳು ಓಬಿ ವ್ಯಾನ್ ಕಳುಹಿಸುತ್ತಿದ್ದವು.  ಹಾಗೆ ಹೆಚ್ಚಿನ ವರದಿಗಾರರನ್ನು ಸಹ ಕಳುಹಿಸುತ್ತಿದ್ದರು,  ಆದರೆ ಪ್ರಸ್ತುತ ರಾಜಕೀಯ ಬೆಳವಣಿಗೆಗಳಿಂದಾಗಿ ವರದಿಗಾರರ ಸಂಖ್ಯೆಯನ್ನು ಕಡಿತಗೊಳಿಸಿವೆ ಎಂದು ಹೇಳಲಾಗಿದೆ.

ಸಾಹಿತ್ಯ ಕ್ಷೇತ್ರದ ಕಾರ್ಯಕ್ರಮಗಳನ್ನು ಕವರೇಜ್ ಮಾಡುವುದಕ್ಕಿಂತ  ರಾಜಕೀಯವೇ ಮಾಧ್ಯಮಗಳಿಗೆ ಪ್ರಮುಖ ವಿಷಯವಾಗಿದೆ. ಸಿಎಂ ಯಡಿಯೂರಪ್ಪ ಫೆಬ್ರವರಿ 7ರ ನಂತರ  ಅಂದರೆ ಸಾಹಿತ್ಯ ಸಮ್ಮೇಳನ ಮುಗಿದ ಮೇಲೆ ಸಂಪುಟ ವಿಸ್ತರಣೆ ಮಾಡಬೇಕಿತ್ತು ಎಂದು  ಕೆಲವರು ಅಭಿಪ್ರಾಯ ಪಟ್ಟಿದ್ದಾರೆ.

ಈ ಮೊದಲು ಬುಧವಾರ ಸಂಪುಟ ವಿಸ್ತರಣೆ ನಡೆಯುತ್ತದೆ ಎಂದು ಹೇಳಲಾಗಿತ್ತು, ಆದರೇ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮ ಇರುವುದರಿಂದ ವಿಸ್ತರಣೆಯನ್ನು ಮುಂದೂಡಲಾಗಿದೆ.  ಗುರುವಾರ ಪ್ರಮಾಣ ವಚನ ಕಾರ್ಯಕ್ರಮ ಇರುವುದರಿಂದ ಇಡೀ ಮಾಧ್ಯಮಗಳೇ  ರಾಜಕೀಯ ಬೆಳವಣಿಗೆಗಳ ಗಮನ ಕೇಂದ್ರೀಕರಿಸುತ್ತವೆ ಎಂದು ಹೇಳಿದ್ದಾರೆ.

ರಾಜ್ಯ ಮತ್ತು ಭಾಷೆಗಳ ಅಭಿವೃದ್ಧಿಗಾಗಿ ಶ್ರಮಿಸಿರುವ ಗೌರವಾನ್ವಿತರಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸನ್ಮಾನ ಮಾಡಬೇಕಿದೆ, ಇವರುಗಳ ಜೊತೆಗೆ ಸುರೇಶ್ ಕುಮಾರ್ ಹಾಗೂ ಮಲ್ಲಿಕಾರ್ಜುನ ಖರ್ಗೆ ಕೂಡ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಶುಕ್ರವಾರದ ಮುಕ್ತಾಯ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಜರಾಗಲಿದ್ದಾರೆ.

ಇನ್ನು ಫೆ 5 ರಿಂದ ಮೂರು ದಿನಗಳ ಕಾಲ‌ ನಡೆಯುವ ಅಖಿಲ ಭಾರತ 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಿದ್ಧತೆ ಗಳು ಶೇ 90 ರಷ್ಟು ಪೂರ್ಣಗೊಂಡಿವೆ. ಸಮ್ಮೇಳನದ ಮುಖ್ಯ ವೇದಿಕೆ, ಪುಸ್ತಕ ಮಳಿಗೆ, ಅಡುಗೆ ವೇದಿಕೆ ಸೇರಿದಂತೆ ಇತರ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ.

ವಸತಿ ಹಾಗೂ ಸಾರಿಗೆ ವ್ಯವಸ್ಥೆಗೂ ಕ್ರಮ ಕೈಗೊಳ್ಳಲಾಗಿದೆ. 113 ಕಡೆ ವಸತಿ ಸೌಕರ್ಯ ಕಲ್ಪಿಸಲಾಗಿದೆ. ಸಮ್ಮೇಳನಕ್ಕೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ನಿಗಮವನ್ನು ಕೇಳಿಕೊಳ್ಳಲಾಗಿದೆ. ಅದೇ ಸಮ್ಮೇಳನದ ಮೂರು ದಿನ ಶಾಲಾ ಕಾಲೇಜುಗಳಿಗೆ ರಜೆ ನೀಡಲು ಚಿಂತನೆ ನಡೆಸಲಾಗೊದೆ. ಈ ಕುರಿತು ಸೋಮವಾರ ನಿರ್ಣಯ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ವಿವರಣೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT