ಕಲಬುರಗಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ: ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ವೈಭವದ ಚಾಲನೆ 
ರಾಜ್ಯ

ಕಲಬುರಗಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ: ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ವೈಭವದ ಚಾಲನೆ

ಕಲ್ಯಾಣ ಕರ್ನಾಟಕ, ಶರಣರ ನಾಡು ಕಲಬುರಗಿಯಲ್ಲಿ ಇಂದಿನಿಂದ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ವೈಭವದ ಚಾಲನೆ ಸಿಕ್ಕಿದೆ, 

ಕಲಬುರಗಿ: ಕಲ್ಯಾಣ ಕರ್ನಾಟಕ, ಶರಣರ ನಾಡು ಕಲಬುರಗಿಯಲ್ಲಿ ಇಂದಿನಿಂದ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ವೈಭವದ ಚಾಲನೆ ಸಿಕ್ಕಿದೆ,

ಉಪಮುಖ್ಯಮಂತ್ರಿ, ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷರಾದ ಗೋವಿಂದ ಕಾರಜೋಳ ರಾಷ್ಟ್ರಧ್ವಜಾರೋಹಣ ಮಾಡಿದರೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಗಾರ್ ಪರಿಷತ್ ಧ್ವಜಾರೋಹಣ ನೆರವೇರಿಸಿ ಸಮ್ಮೇಳನವನ್ನು ಉದ್ಘಾಟಿಸಿದ್ದಾರೆ. ಇನ್ನು ಕಲಬುರಗಿ ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಸಮ್ಮೇಳನ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ವೀರಭದ್ರ ಸಿಂಪಿ ನಾಡಧ್ವಜಾರೋಹಣ ನೆರವೇರಿಸಿದರು.

ಸಮ್ಮೇಳನಾಧ್ಯಕ್ಷರಾದ ಎಚ್.ಎಸ್. ವೆಂಕಟೇಶಮೂರ್ತಿಯವರನ್ನೊಳಗೊಂಡ ವೈಭವದ ಮೆರವಣಿಗೆಗೆ ನಗರದ ಡಾ. ಎಸ್.ಎಂ. ಪಂಡಿತ ರಂಗಮಂದಿರದ ಬಳಿ ಜಿಲ್ಲಾಧಿಕಾರಿಗಳಾದ ಶರತ್ ಬಿ. ಚಾಲನೆ ನೀಡಿದರು.ಈ ವೇಳೆ ಸಂಸದ ಉಮೇಶ್ ಜಾಧ್ವ, ಹಲವಾರು ಸಾಹಿತಿಗಳು ಉಪಸ್ಥಿತರಿದ್ದರು.

ನಲವತ್ತಕ್ಕೆ ಹೆಚ್ಚು ಕಲಾತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದು ಏಳು ಸಾವಿರ ಮಂದಿ ಸಾಹಿತ್ಯ ಪ್ರೇಮಿಗಳು ಹಾಜರಿದ್ದರು,

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಮಗ್ರತೆ, ಸಮರ್ಪಣೆ ಉದ್ದೇಶದೊಂದಿಗೆ ಕರ್ನಾಟಕ ಜನತೆಗೆ ಸೇವೆ ಸಲ್ಲಿಸಲು ಬದ್ಧ: ಡಿಕೆ ಶಿವಕುಮಾರ್

ದೆಹಲಿಯ ಮೆಹ್ರೌಲಿಯಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿತ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ!

ಸಿದ್ದರಾಮಯ್ಯಗೆ ವಿಶ್ರಾಂತಿ ನೀಡಲ್ಲ, ಅವರ ಸೇವೆ ಇನ್ನೂ ಅಗತ್ಯವಿದೆ: CLP ಸಭೆಯಲ್ಲಿ ವೇಣುಗೋಪಾಲ್ ಭಾವುಕ

ಅಭಿವೃದ್ಧಿಯ ಬಂಡಿಯನ್ನು ಮುಂದಕ್ಕೆ ಎಳೆದೊಯ್ಯವ ಜವಾಬ್ದಾರಿ ನಿಮ್ಮ ಹೆಗಲ ಮೇಲಿದೆ: ಡಿಕೆಶಿಗೆ ಸಿದ್ದು ಪತ್ರ!

ಲೋಕಭವನಕ್ಕೆ ತೆರಳಿದ ಡಿ.ಕೆ ಶಿವಕುಮಾರ್: ಸರ್ಕಾರ ರಚನೆಗೆ ರಾಜ್ಯಪಾಲರ ಆಹ್ವಾನ; ಜೂನ್ 3ಕ್ಕೆ ಸಿಎಂ ಆಗಿ ಪ್ರಮಾಣವಚನ!

SCROLL FOR NEXT