ರಾಜ್ಯ

ಐಎಂಎ ಪ್ರಕರಣ: 5 ಪೊಲೀಸರ ವಿರುದ್ಧ ಎಫ್ಐಆರ್ ದಾಖಲಿಸಿದ ಸಿಬಿಐ

Manjula VN

ಬೆಂಗಳೂರು: ಐ ಮಾನಿಟರಿ ಅಡ್ವೈಸರಿ ಕಂಪನಿ ಬಹುಕೋಟಿ ವಂಚನೆ ಪ್ರಕಱಣ ಸಂಬಂಧ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳು ಸೇರಿದಂತೆ ಐವರು ಪೊಲೀಸರ ವಿರುದ್ಧ ಕೇಂದ್ರೀಯ ತನಿಖಾ ದಳದ ಅಧಿಕಾರಿಗಲು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. 

ಐಜಿಪಿ ಹೇಮಂತ್ ನಿಂಬಾಳ್ಕರ್, ಡಿಸಿಪಿ ಅಜಯ್ ಹಿಲೋರಿ ಹಾಗೂ ಕಮರ್ಷಿಯಲ್ ಸ್ಟ್ರೀಟ್ ಠಾಣೆಯ ಹಿಂದಿನ ಇನ್ಸ್ ಪೆಕ್ಟರ್ ಎಂ.ರಮೇಶ್, ಸಬ್ ಇನ್ಸ್ ಪೆಕ್ಟರ್ ಗೌರಿ ಶಂಕರ್, ಸಿಐಡಿ ಡಿವೈಎಸ್'ಪಿಇ, ಬಿ.ಶ್ರೀಧರ್ ಐಎಂಎ ಕಂಪನಿ ಮಾಲೀಕ ಮೊಹಮ್ಮದ್ ಮನ್ಸೂರ್ ಖಾನ್, ಐಎಂಎ ಕಂಪನಿ ನಿರ್ದೇಶಕರಾದ ನಿಜಾಮುದ್ದೀನ್, ವಾಸೀಂ, ಅರ್ಷದ್ ಖಾನ್ ವಿರುದ್ಧ ಸೆಕ್ಷನ್ 120 ಬಿ (ಒಳಸಂಚು) ಅಡಿಯಲ್ಲಿ ಸಿಬಿಐ ಎಫ್ಐಆರ್ ದಾಖಲಿಸಿದೆ. 

ಐಎಂಎ ವಿರುದ್ಧ ಸೂಕ್ತ ತನಿಖೆ ನಡೆಸದೇ ಆ ಕಂಪನಿ ಪರವಾಗಿ ಈ ಐವರು ವರದಿ ನೀಡಿದ್ದಾರೆ. ಇದರ ಅನುಕೂಲ ಪಡೆದ ಐಎಂಎ ಕಂಪನಿಯ ಮಾಲೀಕ ಮತ್ತು ನಿರ್ದೇಶಕ ಹೆಚ್ಚಿನ ಬಡ್ಡಿ ನೀಡುವ ಆಮಿಷವೊಡ್ಡಿ ಸಾವಿರಾರು ಹೂಡಿಕೆದಾರರಿಂದ 4 ಸಾವಿರ ಕೊಟಿಗೂ ಅಧಿಕ ಹಣ ಸಂಗ್ರಹಿಸಿರುವ ಅಂಶ ಸಿಬಿಐ ತನಿಖೆಯಲ್ಲಿ ಬೆಳಕಿಗೆ ಬಂದಿದೆ. 

ಈ ಆರೋಪದ ಮೇರೆಗೆ ಐವರು ಪೊಲೀಸರ ವಿರುದ್ಧ ಸಿಬಿಐ ಅಧಿಕಾರಿಗಳು ಎಫ್ಐಆರ್ ದಾಖಲಿಸಿದೆ ಎಂದು ಹೇಳಲಾಗುತ್ತಿದೆ. 

ಶೀಘ್ರದಲ್ಲೇ ಸಿಬಿಐ ಅಧಿಕಾರಿಗಳು ಪೊಲೀಸರ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳುವ ಸಾಧ್ಯತೆಗಳಿವೆ ಎಂದು ವರದಿಗಳು ತಿಳಿಸಿವೆ. 

SCROLL FOR NEXT