ರಾಜ್ಯ

ಸಂವಿಧಾನದ ಆಶಯಕ್ಕೆ ವಿರುದ್ಧವಾದ  ಕೇಂದ್ರದ ಸಿಎಎ ಕಾಯ್ದೆಗೆ ನನ್ನ ವಿರೋಧವಿದೆ: ಚಿತ್ರ ನಿರ್ದೇಶಕ ಬಿ.ಸುರೇಶ್

Raghavendra Adiga

ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಡೆಗಡೆಗಳಿಗೆ ನಾನು ಹೊಣೆಯಲ್ಲ: ಮನು ಬಳಿಗಾರ

ಕಲಬುರಗಿ:  ಕೇಂದ್ರ ಸರಕಾರ ಜಾರಿ ಮಾಡುತ್ತಿರುವ ಪೌರತ್ವ ತಿದ್ದುಪಡಿ ಕಾಯ್ದೆ ಧರ್ಮಾಧಾರಿತವಾಗಿದ್ದು, ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಆದ್ದರಿಂದ ಈ ಕಾಯ್ದೆಯನ್ನು ವಿರೋಧಿಸುವುದಾಗಿ ಕಿರುತೆರೆ ಸಿನಿಮಾಗಳ ನಿರ್ದೇಶಕ ಬಿ.ಸುರೇಶ್ ಹೇಳಿದ್ದಾರೆ.

ಗುಲಬರ್ಗಾ ವಿಶ್ವವಿದ್ಯಾಲದ ಶ್ರೀ ವಿಜಯ ಪ್ರಧಾನ ವೇದಿಕೆಯಲ್ಲಿ ಕನ್ನಡ ಸಾಹಿತ್ಯ ಕವಿಗೋಷ್ಠಿಯಲ್ಲಿ "ಕಿರುತೆರೆ –ಸಾಮಾಜಿಕ ಜವಾಬ್ದಾರಿಗಳು" ವಿಷಯ ಮಂಡಿಸುವುದಕ್ಕಿಂತ ಮುನ್ನ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಯಲ್ಲಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಇತ್ತೀಚೆಗೆ ನಡೆದ ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬಾಂಬ್ ಹಾಕುತ್ತೇವೆಂದು ಬೆದರಿಕೆ ಹಾಕಿದ ಆರೋಪಿಗಳನ್ನು ಪೊಲೀಸರು ಕೂಡಲೇ ಬಂಧಿಸಬೇಕು. ಬಾಂಬ್ ಹಾಕುತ್ತೇವೆ ಎಂದವರೇ ನಿಜವಾದ ಭಯೋತ್ಪಾದಕರು. ಅಂತವರನ್ನು ಬಂಧಿಸುವ ಮೂಲಕ ಕನ್ನಡಿಗರ ಜೀವವನ್ನು ಉಳಿಸಬೇಕೆಂದು ಒತ್ತಾಯಿಸಿದರು.

ಸಾಹಿತ್ಯ ಪರಿಷತ್ ಒಂದು ಸ್ವಾಯತ್ತ ಸಂಸ್ಥೆ, ಇಲ್ಲಿ ಸರ್ವಾನುಮತದಿಂದ ಕೈಗೊಂಡ ನಿರ್ಣಯ ವಿರೋಧಿಸುವುದು ಸರಿಯಲ್ಲ. ಆದರೆ ಸಚಿವ ಸಿಟಿ ರವಿ ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಅಮ್ಮೇಳನ ವಿರೋಧಿಸಿದ್ದು ಅನುದಾನವನ್ನು ತಡೆ ಹಿಡಿದಿದ್ದರು. ಇದು ಪ್ರಜಾಪ್ರಭುತ್ವ ವಿರೋಧಿ ಲಕ್ಷಣ ಎಂದು ಅವರು ಹೇಳಿದ್ದಾರೆ.

ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಡೆಗಡೆಗಳಿಗೆ ನಾನು ಹೊಣೆಯಲ್ಲ: ಮನು ಬಳಿಗಾರ

ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಆಯ್ಕೆಯಲ್ಲಿ ತಾರತಮ್ಯ ಮಾಡಿಲ್ಲ. ಸಮ್ಮೇಳನದ ಎಲ್ಲಾ ಅಡೆ ತಡೆಗಳಿಗೆ ನನ್ನನ್ನೇ ಹೊಣೆ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ಸ್ಪಷ್ಟಪಡಿಸಿದ್ದಾರೆ.

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶ್ರೀ ವಿಜಯ ಪ್ರಧಾನ ವೇದಿಕೆಯಲ್ಲಿ ಗೋಷ್ಠಿಯ ನಡುವೆ ಮಾತನಾಡಿದ ಅವರು, ನನ್ನ ಮಾತಿಗೆ ಕಿಂಚಿತ್ತು ಬೆಲೆ ಕೊಡದೆ ಸಮ್ಮೇಳನ ನಡೆಸಲಾಗಿದೆ. ಎಲ್ಲಾ ಅಡೆ ತಡೆಗಳಿಗೆ ನಾನೇ ಕಾರಣ ಎಂದು ಆರೋಪಿಸಿ, ಗುರಿ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.

ಇಲ್ಲಿಯವರೆಗೂ ಲೇಖಕರು, ಹೋರಾಟಗಾರರು ಚಿಕ್ಕಮಗಳೂರಿನ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕುರಿತು ನನ್ನ ಪ್ರತಿಕ್ರಿಯೆ ಕೇಳಿಲ್ಲ. ಜಿಲ್ಲಾಧ್ಯಕ್ಷರ ಆಯ್ಕೆಯಲ್ಲಿ ಹಸ್ತಕ್ಷೇಪ ಮಾಡಿಲ್ಲ. ಬದಲಾವಣೆ ಮಾಡಿರುವ ವಿಚಾರ ಅಲ್ಲಿನ ಜಿಲ್ಲಾ ಕಾರ್ಯಕಾರಿ ಸಮಿತಿ ನನ್ನ ಗಮನಕ್ಕೆ ತಂದಿಲ್ಲ. ಸುಳ್ಳು ಆರೋಪಗಳನ್ನು ನನ್ನ ಮೇಲೆ ಹೊರಸಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು

SCROLL FOR NEXT