ರಾಜ್ಯ

6 ನಿರ್ಣಯಗಳೊಂದಿಗೆ ಕಲಬುರಗಿ ನುಡಿಜಾತ್ರೆಗೆ ಅದ್ದೂರಿ ತೆರೆ

Raghavendra Adiga

ಕಲಬುರಗಿ: ಕಲಬುರಗಿಯಲ್ಲಿ ಕಳೆದ ಮೂರು ದಿನಗಳಿಂದ ನಡೆದಿದ್ದ ಎಂಬತ್ತೈದನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಶುಕ್ರವಾರ ಅದ್ದೂರಿ ತೆರೆ ಬಿದ್ದಿದೆ. ಸಮ್ಮೇಳನ ಕೊನೆಯ ದಿನವಾದ ಇಂದು ಆರು ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಸಮ್ಮೇಳನದ ಪ್ರಧಾನ ವೇದಿಕೆಯಲ್ಲಿ ನಡೆದ ಬಹಿರಂಗ ಅಧಿವೇಶನದಲ್ಲಿ ಈ ನಿರ್ಣಯ ಅಂಗೀಕಾರವಾಗಿದೆ.

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಮನು ಬಳಿಗಾರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯಗಳನ್ನು ತೆಗೆದುಕೊಳ್ಲಲಾಗಿದೆ.

ಸಮ್ಮೇಳನದಲ್ಲಿ ತೆಗೆದುಕೊಳ್ಳಲಾಗಿರುವ ನಿರ್ಣಯಗಳು ಹೀಗಿದೆ-

  • ರಾಜ್ಯದಲ್ಲಿನ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಕನ್ನಡ ಮಾಧ್ಯಮದಲ್ಲಿಯೇ ಶಿಕ್ಷಣ ಕಡ್ಡಾಯಗೊಳಿಸಬೇಕು.
  • ಕಲ್ಯಾಣ ಕರ್ನಾಟಕ ಐತಿಹಾಸಿಕ ತಾಣಗಳ ಅಭಿವೃದ್ಧಿ.
  • 371(ಜೆ) ಕಲಂ ತಿದ್ದುಪಡಿಯ ಲೋಪದೋಷಗಳನ್ನು ಸರಿಪಡಿಸಬೇಕು, ಸಮರ್ಪಕ ಅನುಷ್ಠಾನ ಕ್ರಮ ಕೈಗೊಳ್ಳಬೇಕು.
  • ಮಹಾಜನ್ ವರದಿಯೆ ಅಂತಿಮ, ಅದರ ಅನುಷ್ಠಾನಕ್ಕೆ ತಂದು ವಿವಾದ ಕೊನೆಗಾಣಿಸಲು ಆಗ್ರಹ 
  • ಗಡಿಯಲ್ಲಿನ ಕನ್ನಡ ಶಾಲೆಗಳನ್ನು ಮುಚ್ಚದಂತೆ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಆಗ್ರಹ.
  • ಗಡಿ ವಿಷಯದಲ್ಲಿ ಮಹಾರಾಷ್ಟ್ರದ ಉದ್ಧಟತನಕ್ಕೆ ಖಂಡನೆ.

86 ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳವನ್ನು ಹಾವೇರಿಯಲ್ಲಿ ನಡೆಸಲು ತೀರ್ಮಾನವಾಗಿದ್ದು ಇದೇ ವರ್ಷಾಂತ ಅಥವಾ ಮುಂದಿನ ವರ್ಷದ ಪ್ರಾರಂಭದಲ್ಲಿ ಸಮ್ಮೇಳನ ಆಯೋಜಿಸಲು ನಿನ್ನೆ ನಡೆದ ಸಭೆಯಲ್ಲಿ ನಿರ್ಣಯಿಸಲಾಗಿದೆ.
 

SCROLL FOR NEXT