ಕೊರೋನಾ ಸೋಂಕಿಗೆ ಔಷಧಿ ಕಂಡುಹಿಡಿದ ನಿತ್ಯಾನಂದ!
ಜಗತ್ತಿನಾದ್ಯಂತ ಹರಡುತ್ತಿರುವ ಮಾರಕ ಕೊರೋನಾ ವೈರಸ್ ಗೆ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಔಷಧಿ ಕಂಡುಹಿಡಿರುವುದಾಗಿ ವಿಡಿಯೋವೊಂದನ್ನು ಪೋಸ್ಟ್ ಮಾಡಲಾಗಿದೆ.
ಬೆಂಗಳೂರು: ಜಗತ್ತಿನಾದ್ಯಂತ ಹರಡುತ್ತಿರುವ ಮಾರಕ ಕೊರೋನಾ ವೈರಸ್ ಗೆ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಔಷಧಿ ಕಂಡುಹಿಡಿರುವುದಾಗಿ ವಿಡಿಯೋವೊಂದನ್ನು ಪೋಸ್ಟ್ ಮಾಡಲಾಗಿದೆ.
“ಓಂ ನಿತ್ಯಾನಂದ ಪರಮ ಶಿವೋಹಂ” ಎಂಬ ಅಖಂಡ ಮಹಾವಾಕ್ಯ ಮಂತ್ರವನ್ನು ನಿರಂತರ 48 ಗಂಟೆಗಳ ಕಾಲ ಪಠಿಸಿದರೆ ಕೊರೊನಾ ದೇಹ ಬಿಟ್ಟು ಹೋಗುತ್ತೆ ಎಂದು ವಿಡಿಯೋದಲ್ಲಿ ತಿಳಿಸಲಾಗಿದೆ.
ಈ ಅಖಂಡ ಮಹಾವಾಕ್ಯದ ಮಂತ್ರವನ್ನು 48 ಗಂಟೆ ಪಠಿಸಿದರೆ ಧನಾತ್ಮಕ, ಆಧ್ಯಾತ್ಮಿಕ ಶಕ್ತಿ ವೃದ್ದಿಯಾಗಿ ದೇಹದಿಂದ ಕೊರೊನಾ ಓಡಿಹೋಗುತ್ತೆ. ನಿಮ್ಮ ಪ್ರೀತಿ ಹಾಗೂ ಸಹಾನುಭೂತಿಯಿಂದ ಜಗತ್ತಿಗೆ ಒಳಿತು ಮಾಡಲು ಸಾಧ್ಯವಾಗಬಹುದು.
ಶುಕ್ರವಾರದಿಂದ ಭಾನುವಾರದವರೆಗೂ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಿ ಎಂದು ವಿಡಿಯೋ ಮೂಲಕ ನಿತ್ಯಾನಂದ ಸಂದೇಶ ರವಾನಿಸಿದ್ದಾನೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.