ರಾಜ್ಯ

ಕನ್ನಡವನ್ನು ಕಲಿಕಾ ಮಾಧ್ಯಮವನ್ನಾಗಿ ಮಾಡಿ: ಸಾಹಿತ್ಯ ಸಮ್ಮೇಳನದಲ್ಲಿ ಮೊಳಗಿದ ದನಿ

Manjula VN

ಕಲಬುರಗಿ: 3 ದಿನಗಳ ಕಾಲ ಅದ್ದೂರಿಯಾಗಿ ನಡೆದ 845ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಶುಕ್ರವಾರ ಮುಕ್ತಾಯಗೊಂಡಿದ್ದು, ಸಮ್ಮೇಳನದಲ್ಲಿ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಕನ್ನಡವನ್ನು ಕಲಿಕಾ ಮಾಧ್ಯಮವನ್ನಾಗಿ ಮಾಡುವಂತೆ ಒತ್ತಾಯಗಳು ಕೇಳಿ ಬಂದವು. 

ಸಮ್ಮೇಳದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಪರೋಕ್ಷವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. 

ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆಯಿಂದ ನೋವಾಗುತ್ತಿದೆ. ಮೂಲಸಂವಿಧಾನ ಬಲಿಸುವ ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಮಾಡುವ ಕೆಲಸವನ್ನು ಯಾರೂ ಮಾಡಬಾರದು ಎಂದು ಹೇಳಿದರು. 

ಇದೇ ವೇಳೆ ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದ ಮಾತೃಭಾಷೆಯಲ್ಲಿಯೇ ಪ್ರಾಥಮಿಕ ಶಿಕ್ಷಣವನ್ನು ನೀಡುವ ವಿಚಾರವಾಗಿ ಸಂವಿಧಾನದಲ್ಲಿ ತಿದ್ದುಪಡಿ ತರಬೇಕೆಂದು ಪ್ರಧಾನಿಗೆ ಮನವಿ ಮಾಡಲಾಗಿತ್ತು. ಆದರೆ, ಅದು ಕಾರ್ಯಸಾಧುಗೊಂಡಿಲ್ಲ. ಇದೀಗ ರಾಜ್ಯದ ಮುಖ್ಯಮಂತ್ರಿಗಳು ಪ್ರಧಾನಮಂತ್ರಿ ಮೇಲೆ ಒತ್ತಡ ಹೇರಿ ಆ ಬೇಡಿಕೆಯನ್ನು ಈಡೇರಿಸಬೇಕಂದು ಒತ್ತಾಯಿಸಿದರು. 

SCROLL FOR NEXT