ರಾಜ್ಯ

ಬೆಂಗಳೂರು: ಪ್ರತಿಷ್ಠಿತ ಸಾಗರ್ ಆಸ್ಪತ್ರೆಯಲ್ಲಿ ಬೆಂಕಿ, ರೋಗಿಗಳು ಶಿಫ್ಟ್

Shilpa D

ಬೆಂಗಳೂರು: ನಗರದ ಕುಮಾರಸ್ವಾಮಿ ಲೇಔಟ್​ನ ಸಾಗರ್​ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. 
ಶಾರ್ಟ್​ ಸರ್ಕ್ಯೂಟ್​​ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗುತ್ತಿದೆ

ಸದ್ಯ ಆಸ್ಪತ್ರೆಯಲ್ಲಿದ್ದ 50ಕ್ಕೂ ಹೆಚ್ಚು ರೋಗಿಗಳನ್ನ ಹತ್ತಿರದ ವಾಸವಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. 

ಇನ್ನು ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ವಾಹನ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

SCROLL FOR NEXT