ಸಂತೋಷ್ ಹೆಗ್ಡೆ 
ರಾಜ್ಯ

ಭ್ರಷ್ಟಾಚಾರಕ್ಕೆ ಪತ್ರಿಕೋದ್ಯವೂ ಹೊರತಾಗಿಲ್ಲ: ಸಂತೋಷ್ ಹೆಗಡೆ ಬೇಸರ

ನ್ಯಾಯಾಂಗ, ಶಾಸಕಾಂಗ, ಕಾರ್ಯಾಂಗಗಳು ಸರಿಯಾಗಿ ಕೆಲಸ ಮಾಡುವಂತೆ ಎಚ್ಚರಿಸುವಲ್ಲಿ ನಾಲ್ಕನೇ ಅಂಗವಾದ ಪತ್ರಿಕೋದ್ಯಮ ಪ್ರಮುಖ ಪಾತ್ರ ವಹಿಸಬೇಕು.

ಬೆಂಗಳೂರು: ನ್ಯಾಯಾಂಗ, ಶಾಸಕಾಂಗ, ಕಾರ್ಯಾಂಗಗಳು ಸರಿಯಾಗಿ ಕೆಲಸ ಮಾಡುವಂತೆ ಎಚ್ಚರಿಸುವಲ್ಲಿ ನಾಲ್ಕನೇ ಅಂಗವಾದ ಪತ್ರಿಕೋದ್ಯಮ ಪ್ರಮುಖ ಪಾತ್ರ ವಹಿಸಬೇಕು. ಆದರೆ, ಇಂದು ಈ ಕ್ಷೇತ್ರದಲ್ಲಿಯೂ ಭ್ರಷ್ಟಾಚಾರ ತಾಂಡವಾಡುತ್ತಿದೆ ಎಂದು ಮಾಜಿ ಲೋಕಾಯುಕ್ತ, ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗಡೆ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ನ್ಯಾಷನಲ್ ಕಾಲೇಜು ಸಭಾಂಗಣದಲ್ಲಿ ದಿ ನ್ಯಾಷನಲ್ ಎಜುಕೇಶನ್ ಸೊಸೈಟಿ ಆಫ್ ಕರ್ನಾಟಕ ಆಯೋಜಿಸಿದ್ದ, ಪರಿಣಾಮಕಾರಿ ಮಾಧ್ಯಮ ಮತ್ತು ಸಾರ್ವಜನಿಕ ಸಂಪರ್ಕ ಕುರಿತು ಒಂದು ದಿನದ ರಾಜ್ಯ ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಸಂವಿಧಾನದ ನಾಲ್ಕನೇ ಅಂಗವಾದ ಪತ್ರಿಕೋದ್ಯಮವು ಇಂದು ತನ್ನ ಶಿಷ್ಟಾಚಾರ ಕಳೆದುಕೊಳ್ಳುವತ್ತ ಸಾಗಿದೆ. ಭ್ರಷ್ಟಾಚಾರ, ಸಮಾಜದ ಲೋಪದೋಷಗಳನ್ನು ತಿದ್ದುವಲ್ಲಿ ಪ್ರಮುಖ ಪಾತ್ರ ವಹಿಸಬೇಕು. ಆದರೆ, ಇಂದು ಈ ಕ್ಷೇತ್ರದಲ್ಲಿಯೂ ಭ್ರಷ್ಟಾಚಾರ ತಾಂಡವಾಡುತ್ತಿದೆ. ಇನ್ನು, ಕಾಸಿಗಾಗಿ ಸುದ್ದಿ ಮತ್ತು ಮೆಚ್ಚುಗೆ, ಬಣ್ಣಿಸುವ ಸುದ್ದಿ ಪ್ರಸಾರ ನಿಲ್ಲಿಸಬೇಕಾಗಿದೆ ಎಂದು ಹೇಳಿದರು.

ರಾಜಕೀಯ ನಾಯಕರಿಗೆ ದೇಶದ ಅಭಿವೃದ್ಧಿ ಹಾಗೂ ಜನಹಿತಾಸಕ್ತಿ ಬಗ್ಗೆ ಕಾಳಜಿ ಇಲ್ಲದಾಗಿದೆ‌‌. ಪತ್ರಿಕೋದ್ಯಮದಿಂದ ಸತ್ಯಾಂಶವನ್ನು ದೇಶದ ಜನರಿಗೆ‌ ಮುಟ್ಟಿಸುವ ಕೆಲಸ ಆಗಬೇಕು. ರಾಷ್ಟ್ರದ ಬಹುತೇಕರಲ್ಲಿ ಅಧಿಕಾರದಿಂದ ಹಣ, ಹಣದಿಂದ ಅಧಿಕಾರ ಎಂಬ ಭ್ರಮೆ ಇದ್ದು, ಶ್ರೀಮಂತಿಕೆ, ಅಧಿಕಾರ ಪೂಜಿಸುವ ಈ ಸಮಾಜದಲ್ಲಿ ಸತ್ಯವಂತರಿಗೆ ಬೆಲೆ ಇಲ್ಲದಾಗಿದೆ. ಇದನ್ನೆಲ್ಲ ಲೇಖನಿ ಎಂಬ ಕತ್ತಿಯ ಮೂಲಕ ತಿದ್ದಿ, ತೀಡುವ ಕೆಲಸ ಆಗಬೇಕಿದೆ ಎಂದರು. 

ಪೊಲೀಸ್ ಮತ್ತು ಮಾಧ್ಯಮ ಕುರಿತು ಮಾತನಾಡಿದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಶಂಕರ್ ಬಿದರಿ, ಪ್ರಜಾಪ್ರಭುತ್ವದಲ್ಲಿ ಪೊಲೀಸ್ ಮತ್ತು ಮಾಧ್ಯಮ ಪ್ರಮುಖ ಪಾತ್ರ ವಹಿಸುತ್ತಾರೆ. ಆದರೆ, ಇಂದಿನ ವ್ಯವಸ್ಥೆ ಪೊಲೀಸರಿಂದ ಸ್ವಾತಂತ್ರ್ಯ ಕಸಿದುಕೊಂಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಮ್ಮ ನ್ಯಾಯಾಂಗ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆ ತರುವ ಅವಶ್ಯಕತೆ ಇದೆ. ಸಂಸತ್ತು ವಿಧಾನಸಭೆಯಲ್ಲಿ ಶೇ.50ರಷ್ಟು ಕ್ರಿಮಿನಲ್ ಹಿನ್ನೆಯಲ್ಲಿರುವವರು ಇದ್ದಾರೆ. ಇವರು ಅಧಿಕಾರದಲ್ಲಿರುವಾಗ ನ್ಯಾಯಾಂಗದ ಬಲವರ್ಧನೆ ಹೇಗೆ ಸಾಧ್ಯ. ಬದಲಾವಣೆ ತರಲು ಶ್ರೀರಾಮನೇ ಬಂದ ಎಂದುಕೊಂಡೆವು. ಆದರೆ 6 ವರ್ಷದಿಂದ ಯಾವ ಬದಲಾವಣೆಯೂ ಕಾಣಲಿಲ್ಲ‌. ಎಲ್ಲವೂ ಜಾಸ್ತಿಯೇ ಆಗಿದೆ ಎಂದು ದೂರಿದರು.

ಈ ಸಂದರ್ಭದಲ್ಲಿ ಎನ್ ಇಎಸ್ ರಾಜ್ಯ ಕಾರ್ಯದರ್ಶಿ ಪ್ರೊ.ಎಸ್.ಎನ್.ನಾಗರಾಜ್ ರೆಡ್ಡಿ, ಕಾಲೇಜಿನ ಪ್ರಾಂಶುಪಾಲೆ ಡಾ.ಬಿ.ಆರ್.ಪರಿಣಿತಾ, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ.ಎಸ್.ಜಯಸಿಂಹ, ಪತ್ರಕರ್ತ ಗೌರಿಶ್ ಅಕ್ಕಿ‌ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT