ಎಸ್ ಎ ರಾಮದಾಸ್ 
ರಾಜ್ಯ

ಶಾಸಕ ಎಸ್‌.ಎ.ರಾಮದಾಸ್‌ಗೆ ಲಘು ಹೃದಯಾಘಾತ; ಶಸ್ತ್ರ ಚಿಕಿತ್ಸೆ, 

ಬಿಜೆಪಿ ಶಾಸಕ ಎಸ್‌.ಎ.ರಾಮದಾಸ್‌ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ

ಮೈಸೂರು: ಬಿಜೆಪಿ ಶಾಸಕ ಎಸ್‌.ಎ.ರಾಮದಾಸ್‌ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಲಘು ಹೃದಯಾಘಾತದ ಹಿನ್ನೆಲೆಯಲ್ಲಿ ಅವರಿಗೆ ವೈದ್ಯರ ತಂಡ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿ ಸ್ಟಂಟ್ ಅಳವಡಿಕೆ ಮಾಡಿದೆ.

ನಿನ್ನೆ ಮಧ್ಯರಾತ್ರಿ 3 ಗಂಟೆ ಸುಮಾರಿಗೆ ಅವರಿಗೆ ಮನೆಯಲ್ಲಿ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಅಪೋಲೋ ಆಸ್ಪತ್ರೆಗೆ ಕರೆತರಲಾಯಿತು. ತುರ್ತು ಚಿಕಿತ್ಸಾ ವಿಭಾಗದಲ್ಲಿ ಈಗ ಅವರಿಗೆ ಚಿಕಿತ್ಸೆ ಮುಂದುವರಿಸಲಾಗಿದ್ದು, ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ಎಸ್‌.ಎ.ರಾಮದಾಸ್ ಅವರು ಮಾಜಿ ಸಚಿವರೂ ಆಗಿದ್ದು, ಈಗಿನ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಕೆಲವು ದಿನಗಳ ಹಿಂದೆಯಷ್ಟೇ ಇಚ್ಛೆ ವ್ಯಕ್ತಪಡಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಾಮನೂರು ಶಿವಶಂಕರಪ್ಪ ವಿಧಿವಶ: ಸಿಎಂ ಸೇರಿ ಗಣ್ಯರ ಸಂತಾಪ; ಡಿಸೆಂಬರ್ 15ರಂದು ಶಾಲಾ-ಕಾಲೇಜುಗಳಿಗೆ ರಜೆ!

3rd T20: ಭಾರತಕ್ಕೆ 7 ವಿಕೆಟ್‌ಗಳ ಅಮೋಘ ಜಯ; ದಕ್ಷಿಣ ಆಫ್ರಿಕಾ ವಿರುದ್ಧ 2-1 ಮುನ್ನಡೆ!

Hardik Pandya ಐತಿಹಾಸಿಕ ದಾಖಲೆ: T20 ಕ್ರಿಕೆಟ್‌ನಲ್ಲಿ 1000 ರನ್, 100 ವಿಕೆಟ್‌ ಪಡೆದ ಭಾರತದ ಮೊದಲ ವೇಗಿ!

ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶ

ಶಿವಾಜಿಯನ್ನು ಮುಸ್ಲಿಂ ವಿರೋಧಿ ಅನ್ನಬಾರದು: ಸಚಿವ ಸಂತೋಷ್​​ ಲಾಡ್; ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು- ಯತ್ನಾಳ್

SCROLL FOR NEXT