ಸಂಗ್ರಹ ಚಿತ್ರ 
ರಾಜ್ಯ

ಶವಸಂಸ್ಕಾರದ ವೇಳೆ ಮೃತ ವ್ಯಕ್ತಿಯ ಆಧಾರ್ ಕಡ್ಡಾಯವಲ್ಲ: ಸಿಬ್ಬಂದಿಗೆ ಬಿಬಿಎಂಪಿ ಸೂಚನೆ

ಬಿಬಿಎಂಪಿಯ ವಿದ್ಯುತ್ ಚಿತಾಗಾರ ಹಾಗೂ ರುದ್ರಭೂಮಿಯಲ್ಲಿ ಶವಸಂಸ್ಕಾರಕ್ಕೆ ಮೃತ ವ್ಯಕ್ತಿಯ ಆಧಾರ್ ಗುರುತಿನ ಚೀಟಿ  ಕಡ್ಡಾಯವಲ್ಲ ಎಂಬು ಬಿಬಿಎಂಪಿ ಸ್ಪಷ್ಟಪಡಿಸಿದೆ. 

ಬೆಂಗಳೂರು: ಬಿಬಿಎಂಪಿಯ ವಿದ್ಯುತ್ ಚಿತಾಗಾರ ಹಾಗೂ ರುದ್ರಭೂಮಿಯಲ್ಲಿ ಶವಸಂಸ್ಕಾರಕ್ಕೆ ಮೃತ ವ್ಯಕ್ತಿಯ ಆಧಾರ್ ಗುರುತಿನ ಚೀಟಿ  ಕಡ್ಡಾಯವಲ್ಲ ಎಂಬು ಬಿಬಿಎಂಪಿ ಸ್ಪಷ್ಟಪಡಿಸಿದೆ. 

ಈ ಕುರಿತು ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ರವಿಕುಮಾರ್ ಸುರಪುರ ಸುತ್ತೋಲೆ ಹೊರಡಿಸಿದ್ದು, ಶವ ಸಂಸ್ಕಾರಕ್ಕೆ ಮೃತ ವ್ಯಕ್ತಿಯ ಆಧಾರ್ ಗುರುತಿನ ಚೀಟಿ ಕಡ್ಡಾಯವಲ್ಲ. ಪಾಲಿಕೆಯ ವಿವಿಧ ಚಿತಾಗಾರ ಹಾಗೂ ರುದ್ರ ಭೂಮಿಯಲ್ಲಿನ ಸಿಬ್ಬಂದಿ, ಮೃತ ವ್ಯಕ್ತಿಯ ಶವ ಸಂಸ್ಕಾರಕ್ಕೆ ಆಧಾರ್ ಕಾರ್ಡ್ ಕೇಳುತ್ತಿರುವ ಬಗ್ಗೆ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಈ ಸುತ್ತೋಲೆ ಹೊರಡಿಸಲಾಗಿದೆ ಎಂದು ತಿಳಿದುಬಂದಿದೆ. 

ಆಧಾರ್ ಕಾರ್ಡ್ ಪಡೆಯುವಂತೆ ಯಾವುದೇ ಸೂಚನೆ ನೀಡಿಲ್ಲ ಸೂಚನೆ ನೀಡಿರುವ ದಾಖಲೆಗಳನ್ನು ಹೊರತುಪಡಿಸಿ, ಬೇರೆ ದಾಖಲೆಗಳನ್ನು ಕೇಳಿದರೆ ಶಿಸ್ತು ಕ್ರಮ ತಗೆದುಕೊಳ್ಳಲಾಗುತ್ತದೆ ಎಂದು ಸಿಬ್ಬಂದಿಗೆ ಎಚ್ಚರಿಕೆ ನೀಡಿದ್ದಾರೆ. 

ವ್ಯಕ್ತಿ ಮರಣ ಹೊಂದಿರುವ ಬಗ್ಗೆ ವೈದ್ಯ ಅಥವಾ ಆಸ್ಪತ್ರೆಯಿಂದ ದೃಢೀಕರಣ ಪತ್ರ, ಶವ ಸಂಸ್ಕಾರಕ್ಕೆ ತಂದಿರುವ ದೇಹವನ್ನು ಖಚಿತಪಡಿಸಿಕೊಳ್ಳುವುದಕ್ಕೆ ಮೃತ ವ್ಯಕ್ತಿಯ ಭಾವಚಿತ್ರ ಹೊಂದಿರುವ ಯಾವುದಾದರೂ ಗುರುತಿನ ಚೀಟಿ, ಸೂಕ್ತ ದಾಖಲೆ ಇಲ್ಲದ ಸಂದರ್ಭದಲ್ಲಿ ಪಾರ್ಥೀವ ಶರೀರದೊಂದಿಗೆ ಬರುವ ನಿಕಟವರ್ತಿಯಿಂದ, ವೈದ್ಯರಿಂದ ಅಥವಾ ಆಸ್ಪತ್ರೆಯಿಂದ ಶವ ಸಂಸ್ಕಾರಕ್ಕೆ ತಂದಿರುವ ಮೃತದೇಹದ ಬಗ್ಗೆ ಸ್ವಯಂ ಮುಚ್ಚಳಿಕೆ ಪತ್ರ ಹಾಗೂ ಯಾವುದಾದರೂ ಗುರಿತಿನ ಚೀಟಿ ಪಡೆದುಕೊಳ್ಳುವಂತೆ ನಿರ್ದೇಶಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ