ರಾಜ್ಯ

ದೇಶ ದ್ರೋಹದಡಿ ಶಾಲಾ ಮಕ್ಕಳ ವಿಚಾರಣೆ: ರಾಜ್ಯ ಸರ್ಕಾರ, ಪೊಲೀಸರಿಗೆ ಹೈಕೋರ್ಟ್ ನೋಟಿಸ್

Lingaraj Badiger

ಬೆಂಗಳೂರು: ಬೀದರ್ ನ ಶಾಹಿನ್ ಶಿಕ್ಷಣ ಸಂಸ್ಥೆಯ ಶಾಲೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ - ಸಿಎಎ ವಿರೋಧಿಸಿ ನಾಟಕ ಪ್ರದರ್ಶಿಸಿದ್ದ ವಿದ್ಯಾರ್ಥಿಗಳನ್ನು ದೇಶದ್ರೋಹ ಆರೋಪದಡಿ ವಿಚಾರಣೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಶುಕ್ರವಾರ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.

ದೇಶ ದ್ರೋಹದಡಿ ಶಾಲಾ ಮಕ್ಕಳನ್ನು ವಿಚಾರಣೆ ನಡೆಸಿದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ರಾಜ್ಯ ಸರ್ಕಾರ ಮತ್ತು ಪೊಲೀಸರಿಗೆ ನೋಟೀಸ್ ಜಾರಿ ಮಾಡಿದೆ.

ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಈ ಪ್ರಕರಣದಲ್ಲಿ ಪೊಲೀಸರ ಮೇಲೆ ಕ್ರಮ ಕೈಗೊಳ್ಳಬೇಕೆಂಬ ಆಕ್ರೋಶ ವ್ಯಕ್ತವಾಗಿತ್ತು. ಸಣ್ಣ ವಯಸ್ಸಿನ ವಿದ್ಯಾರ್ಥಿಗಳು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಾಟಕ ಪ್ರದರ್ಶಿಸಿದ್ದರು. ಈ ನಾಟಕ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹಿನ್ನೆಲೆ ದೇಶದ್ರೋಹ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ನಾಟಕ ಪ್ರದರ್ಶಿಸಿದ್ದ ಸಣ್ಣ ವಯಸ್ಸಿನ ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸಿದ್ದರು. ವಿಚಾರಣೆ ನಡೆಸಿದ ಪೊಲೀಸರ ವಿರುದ್ಧ ಕ್ರಮಕೈಗೊಳ್ಳುವಂತೆ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಫೆ. ೧೯ರೊಳಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವರಣೆ ನೀಡುವಂತೆ ಸರ್ಕಾರ ಮತ್ತು ಪೊಲೀಸರಿಗೆ ನೋಟೀಸ್ ಜಾರಿ ಮಾಡಿದೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವ ವಕೀಲ ನಯನ ಜ್ಯೋತಿ ಮಾತನಾಡಿ, ಶಾಲೆಯ ೯ ವರ್ಷಕ್ಕಿಂತ ಕಡಿಮೆ ವಯಸ್ಸಿನಿ ಸುಮಾರು ೮೫ ಮಕ್ಕಳನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ. ಮಕ್ಕಳ ಮಾನಸಿಕ ಸ್ಥಿತಿ ಮೇಲೆ ಇದು ಗಂಭೀರ ಪರಿಣಾಮ ಬೀರಿದೆ ಎಂದು ನ್ಯಾಯಪೀಠದ ಗಮನ ಸೆಳೆದಿದ್ದಾರೆ.

SCROLL FOR NEXT