ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋದ ಮೂವರು ಯುವಕರು ನೀರು ಪಾಲು.! 
ರಾಜ್ಯ

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋದ ಮೂವರು ಯುವಕರು ನೀರು ಪಾಲು

ಕಾವೇರಿ ನದಿಯಲ್ಲಿ ಈಜಲು ಹೋದ ಮೂವರು ಯುವಕರು ಜಲ ಸಮಾಧಿ ಯಾಗಿರುವ ಘಟನೆ ಶ್ರೀರಂಗಪಟ್ಟಣದ ರೈಲ್ವೆ ನಿಲ್ದಾಣದ ಬಳಿಯ ಕಾವೇರಿ ನದಿಯಲ್ಲಿಂದು ನಡೆದಿದೆ.

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋದ ಮೂವರು ಯುವಕರು ಜಲ ಸಮಾಧಿ ಯಾಗಿರುವ ಘಟನೆ ಶ್ರೀರಂಗಪಟ್ಟಣದ ರೈಲ್ವೆ ನಿಲ್ದಾಣದ ಬಳಿಯ ಕಾವೇರಿ ನದಿಯಲ್ಲಿಂದು ನಡೆದಿದೆ.

ಮುಜಾಸಿಮ್ ಅಹಮದ್(18) ತೌಸೀಫ್(17)ಇಫ್ತಿಹಾರ್(18) ಮೃತ ದುರ್ದ್ಯವಿಗಳಾಗಿದ್ದು ಮೃತರೆಲ್ಲರು ಹಾಸನದ ಅರಸೀಕೆರೆ ಮೂಲದವರಾಗಿದ್ದು ಮೈಸೂರಿನ ಸಿದ್ದಿಕ್ ಮೊಹಲ್ಲಾದ ತಾರುಮುಲ್ಲಾ ಸಿದ್ದಿಕ್ ಟ್ರಸ್ಟ್ ನಲ್ಲಿ ಅರೇಬಿಕ್ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. 

ಇಂದು ಮೀನು ಹಿಡಿಯಲು ಬಂದಿದ್ದವರು ಈಜಲು ಹೋಗಿದ್ದ ವೇಳೆ  ಮೃತ ಪಟ್ಟಿರಬಹುದೆಂದ ಪೊಲೀಸರು ಶಂಕೆವ್ಯಕ್ತಪಡಿಸಿದ್ದಾರೆ. ಮೂವರಲ್ಲಿ ಮುಜಾಸೀಮ್ ಶವ ಬೆಳಿಗ್ಗೆ ಪತ್ತೆಯಾಗಿದ್ದು ಉಳಿದ ಇಬ್ಬರ ಶವಗಳು ಮಧ್ಯಾಹ್ನದ ಬಳಿಕ ಪತ್ತೆಯಾಗಿವೆ. ಈ ಸಂಬಂಧ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ: ನಾಗಯ್ಯ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

SCROLL FOR NEXT