ರಾಜ್ಯ

ಹಾಸನ ಇಂಜಿನಿಯರ್ ಕಾಲೇಜು ಮುಚ್ಚಿದರೆ ಬೀದಿಗಿಳಿದು ಹೋರಾಟ: ಎಚ್‌.ಡಿ.ರೇವಣ್ಣ

Sumana Upadhyaya

ಹಾಸನ:ಹಾಸನ ತಾಲ್ಲೂಕಿನ ಶಾಂತಿಗ್ರಾಮ ಗ್ರಾಮದ ಮೊಸಳೆಹೊಸಹಳ್ಳಿಯಲ್ಲಿರುವ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಮುಚ್ಚುವುದನ್ನು ಜೆಡಿಎಸ್ ತೀವ್ರವಾಗಿ ವಿರೋಧಿಸಿದೆ.


ಹಾಸನದಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿ (ಎಸ್) ಮುಖಂಡ ಮತ್ತು ಮಾಜಿ ಸಚಿವ ಎಚ್.ಡಿ. ರೇವಣ್ಣ, ಉನ್ನತ ಶಿಕ್ಷಣ ಖಾತೆಯನ್ನು ಹೊಂದಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ ನಾರಾಯಣ್, 2019-20 ಶೈಕ್ಷಣಿಕ ವರ್ಷದಲ್ಲಿ ಪ್ರಾರಂಭವಾದ ಕಾಲೇಜನ್ನು ಮುಚ್ಚಲು ಆದೇಶಿಸಿದ್ದಾರೆ. 173 ವಿದ್ಯಾರ್ಥಿಗಳು ಕಾಲೇಜಿನಲ್ಲಿ ಪ್ರವೇಶ ಪಡೆದಿದ್ದಾರೆ. ಇದು ಎಐಸಿಟಿಇ ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ ಅಗತ್ಯ ಅನುಮತಿಗಳನ್ನು ಪಡೆದಿದೆ. ಆದರೂ ಇದನ್ನು ಮುಚ್ಚಲು ಮುಂದಾಗಿರುವುದು ಖಂಡನೀಯ ಎಂದು ಹೇಳಿದರು.


13 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ, ವಿದ್ಯಾರ್ಥಿಗಳ ಪ್ರವೇಶದ ವಿಷಯದಲ್ಲಿ ಹಾಸನ ಕಾಲೇಜು 4 ನೇ ಸ್ಥಾನದಲ್ಲಿದೆ ಮತ್ತು ಹೆಚ್ಚಿನ ಸಂಖ್ಯೆಯ ಬಡ ವಿದ್ಯಾರ್ಥಿಗಳು ಇಲ್ಲಿ ಓದುತ್ತಿದ್ದಾರೆ. 173 ವಿದ್ಯಾರ್ಥಿಗಳಲ್ಲಿ 165 ವಿದ್ಯಾರ್ಥಿಗಳು ವಿದ್ಯಾರ್ಥಿವೇತನವನ್ನು ಪಡೆಯುತ್ತಿದ್ದಾರೆ ಎಂದು ಅವರು ವಿವರಿಸಿದರು.

SCROLL FOR NEXT