ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಬೆಂಗಳೂರು: ರೌಡಿಶೀಟರ್ ಸೀನನ ಕಾಲಿಗೆ ಪೊಲೀಸ್ ಗುಂಡೇಟು

ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಸೀನ ಅಲಿಯಾಸ್ ಸೀಗಡಿ ಸೀನನ ಕಾಲಿಗೆ ಪೊಲೀಸರು ಗುಂಡು ಹಾರಿಸಿ ನಗರದ ಜಾಲಹಳ್ಳಿಯಲ್ಲಿ ಬಂಧಿಸಿದ್ದಾರೆ.

ರೌಡಿಶೀಟರ್ ಸೀನ
Raghavendra Adiga
Updated On : 16 Feb 2020, 11:26 am

ಬೆಂಗಳೂರು:  ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಸೀನ ಅಲಿಯಾಸ್ ಸೀಗಡಿ ಸೀನನ ಕಾಲಿಗೆ ಪೊಲೀಸರು ಗುಂಡು 
ಹಾರಿಸಿ ನಗರದ ಜಾಲಹಳ್ಳಿಯಲ್ಲಿ ಬಂಧಿಸಿದ್ದಾರೆ.

ರಾಜಗೋಪಾಲನಗರ ಠಾಣೆಯಲ್ಲಿ ಸೀನ ರೌಡಿ ಶೀಟರ್ ಪಟ್ಟಿಯಲ್ಲಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ರಸ್ತೆ ಬದಿ ನಿಲ್ಲಿಸಿದ ವಾಹನ ಜಖಂ ಪ್ರಕರಣ ಸಂಬಂಧಿಸಿದಂತೆ ಖಚಿತ ಮಾಹಿತಿ ಮೇರೆಗೆ ರಾಜಗೋಪಾಲನಗರ ಇನ್​ಸ್ಪೆಕ್ಟರ್​ ದಿನೇಶ್ ಪಾಟೀಲ್ ಮತ್ತು ಸಿಬ್ಬಂದಿ ಬಂಧಿಸಲು ತೆರಳಿದ್ದರು. ಈ ವೇಳೆ ಆರೋಪಿ ಸೀನ, ಪೊಲೀಸ್‌ ಪೇದೆ ವೀರಭದ್ರಪ್ಪ ಅವರ ಕೈಗೆ ಚಾಕುವಿನಿಂದ ತಿವಿದು ಹಲ್ಲೆಗೆ ಯತ್ನಿಸಿದ್ದಾನೆ. ಆ ವೇಳೆ ಆತ್ಮರಕ್ಷಣೆಗಾಗಿ ಇನ್​ಸ್ಪೆಕ್ಟರ್​ ದಿನೇಶ್ ಪಾಟೀಲ್ ಗುಂಡು ಹಾರಿಸಿದ್ದಾರೆ.

Advertisement

Advertisement

ರಾಜಗೋಪಾಲನಗರದಲ್ಲಿ 11 ಆಟೋ ಹಾಗೂ 4 ಕಾರಿನ ಗಾಜು ಒಡೆದಿದ್ದ ಆರೋಪ ಸೀನನ ಮೇಲಿದೆ. ಘಟನೆಯಲ್ಲಿ ಗಾಯಗೊಂಡ ಪೇದೆಯನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments