ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಆರೋಗ್ಯ ನಿರೀಕ್ಷಕ ಆತ್ಮಹತ್ಯೆಗೆ ಶರಣು

ಬೆಟ್ಟದ ಮೇಲಿಂದ ಜಿಗಿದು ಆರೋಗ್ಯ ನಿರೀಕ್ಷಕರೊಬ್ಬರು ಆತ್ಮಹತ್ಯೆಗೆ  ಶರಣಾಗಿರುವ ಘಟನೆ ರಾಮನಗರ ತಾಲೂಕಿನ ಎಸ್ ಆರ್ ಎಸ್ ಬೆಟ್ಟದಲ್ಲಿ ನಡೆದಿದೆ.

ಬೆಂಗಳೂರು: ಬೆಟ್ಟದ ಮೇಲಿಂದ ಜಿಗಿದು ಆರೋಗ್ಯ ನಿರೀಕ್ಷಕರೊಬ್ಬರು ಆತ್ಮಹತ್ಯೆಗೆ  ಶರಣಾಗಿರುವ ಘಟನೆ ರಾಮನಗರ ತಾಲೂಕಿನ ಎಸ್ ಆರ್ ಎಸ್ ಬೆಟ್ಟದಲ್ಲಿ ನಡೆದಿದೆ.

ಬೆಂಗಳೂರಿನ ರುಕ್ಮಿಣಿ ನಗರದ ಪ್ರಶಾಂತ್(38)ಆತ್ಮಹತ್ಯೆ ಶರಣಾದ ಆರೋಗ್ಯ ನಿರೀಕ್ಷಕರು.

ಮೃತರು ಬೆಂಗಳೂರಿನ ಯಲಹಂಕದಲ್ಲಿ ಆರೋಗ್ಯ ನಿರೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದ  ಮೂರು ದಿನಗಳಿಂದ ಮನೆಯಿಂದ ತೆರಳಿದ್ದ ಪ್ರಶಾಂತ್ ಅವರು ನಾಪತ್ತೆಯಾಗಿದ್ದಾರೆ ಎಂದು ಆರೋಪಿಸಿ ಕುಟುಂಬಸ್ಥರು ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. 

ಪ್ರಕರಣದ  ಜಾಡು ಹಿಡಿದ ಪೊಲೀಸರು, ಮೃತ ಪ್ರಶಾಂತ್ ಅವರ ಮೊಬೈಲ್ ಟ್ರ್ಯಾಕ್ ಮಾಡಿದ್ದರು. ನಂತರ  ರಾಮನಗರದ ಎಸ್ ಆರ್ ಎಸ್ ಬೆಟ್ಟದಲ್ಲಿ ಮೊಬೈಲ್ ಸಿಗ್ನಲ್ ಪತ್ತೆಯಾಗಿತ್ತು. ತಕ್ಷಣವೇ  ಪೊಲೀಸರು ಸ್ಥಳ ಪರಿಶೀಲಿಸಿದಾಗ ಮೃತರ ದ್ವಿಚಕ್ರ ವಾಹನ ಬೆಟ್ಟದಲ್ಲಿ ಪತ್ತೆಯಾಗಿತ್ತು. ನಂತರ ಪೊಲೀಸರು ಬೆಟ್ಟದ ಸುತ್ತ ಮುತ್ತಲೂ ಪರಿಶೀಲಿಸಿದಾಗ, ಪ್ರಶಾಂತ್ ಅವರ ಶವ  ಪತ್ತೆಯಾಗಿದೆ.

ಪ್ರಶಾಂತ್ ಅವರ ಆತ್ಮಹತ್ಯೆ ಗೆ ನಿಖರವಾದ ಕಾರಣ ಇನ್ನು ತಿಳಿದು ಬಂದಿಲ್ಲ.

ಘಟನೆಗೆ ಸಂಬಂಧಿಸಿದಂತೆ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT