ರಾಜ್ಯ

ಮಹಾಶಿವರಾತ್ರಿ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ಹೆಚ್ಚುವರಿ ಬಸ್‌ ಸೇವೆ

ಮಹಾಶಿವರಾತ್ರಿ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಫೆಬ್ರವರಿ 20 ಮತ್ತು 21ರಂದು ಕೆಎಸ್‌ಆರ್‌ಟಿಸಿಯಿಂದ 300ಕ್ಕೂ ವಿಶೇಷ ಬಸ್‌ ಸೇವೆ ಒದಗಿಸಲಾಗಿದೆ.

ಬೆಂಗಳೂರು: ಮಹಾಶಿವರಾತ್ರಿ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಫೆಬ್ರವರಿ 20 ಮತ್ತು 21ರಂದು ಕೆಎಸ್‌ಆರ್‌ಟಿಸಿಯಿಂದ 300ಕ್ಕೂ ವಿಶೇಷ ಬಸ್‌ ಸೇವೆ ಒದಗಿಸಲಾಗಿದೆ.

ಗುರುವಾರ ಮತ್ತು ಶುಕ್ರವಾರ ರಾಜ್ಯ ಮತ್ತು ಹೊರ ರಾಜ್ಯಗಳಿಗೆ ಹೆಚ್ಚುವರಿಯಾಗಿ 300 ವಿಶೇಷ ಬಸ್ ಹಾಗೂ ರಾಜ್ಯದ ನಾನಾ ಭಾಗಗಳಿಂದ ಬೆಂಗಳೂರಿಗೆ ಫೆಬ್ರವರಿ 23ರಂದು ವಿಶೇಷ ಬಸ್‌ ಸೇವೆಯನ್ನು ಒದಗಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಹೇಳಿಕೆಯಲ್ಲಿ ತಿಳಿಸಿದೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ , ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್‌, ತಿರುಪತಿ ಸೇರಿದಂತೆ ಇನ್ನಿತರೆ ಸ್ಥಳಗಳಿಗೆ ವಿಶೇಷ ಬಸ್‌ಗಳು ಹೆಚ್ಚುವರಿಯಾಗಿ ಸಂಚರಿಸಲಿವೆ.

ಮೈಸೂರು ರಸ್ತೆಯ ಸ್ಯಾಟಲೈಟ್‌ ಬಸ್‌ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಬಸ್‌ಗಳು ಸಂಚರಿಸಲಿವೆ. ಮಧುರೈ, ಕುಂಭಕೋಣಂ, ತಿರುಚ್ಚಿ, ಚೆನ್ನೈ, ಕೊಯಮತ್ತೂರು, ತಿರುಪತಿ, ವಿಜಯವಾಡ, ಹೈದರಾಬಾದ್‌ ಮುಂತಾದ ಪ್ರದೇಶಗಳಿಗೆ ತೆರಳುವ ಐಷಾರಾಮಿ ಬಸ್‌ಗಳು ಶಾಂತಿನಗರದಲ್ಲಿನ ಡಿಪೊ 4 ಮತ್ತು ಡಿಪೊ 2ರ ಮುಂಭಾಗದಿಂದ ಕಾರ್ಯಾಚರಣೆಗೊಳ್ಳಲಿವೆ.

ನಾಲ್ಕು ಅಥವಾ ಹೆಚ್ಚು ಮಂದಿ ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್‌ ಕಾಯ್ದಿರಿಸಿದರೆ, ಶೇ. 5ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ಹೋಗುವ ಮತ್ತು ಬರುವ ಪ್ರಯಾಣ ಟಿಕೆಟ್‌ ಒಮ್ಮೆಲೇ ಕಾಯ್ದಿರಿಸಿದರೆ, ವಾಪಸ್‌ ಬರುವ ಪ್ರಯಾಣ ದರದಲ್ಲಿ ಶೇ. 10ರಷ್ಟು ರಿಯಾಯಿತಿ ಸಿಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

ದೆಹಲಿ: ಫ್ರೆಂಡ್​ಶಿಪ್ ನಿರಕಾರಿಸಿದ್ದಕ್ಕೆ 21 ವರ್ಷದ ಮಾಡೆಲ್'ನನ್ನು ಆಕೆಯ ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್!

ಅಸಮಾಧಾನ ತಣಿಸಲು CM ಡಿಕೆಶಿ ಆಪ್ತ ಶಾಸಕ ಆಸೀಫ್ ಸೇಠ್‌ಗೆ ‘ಬುಡಾ’ ಅಧ್ಯಕ್ಷ ಪಟ್ಟ

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!