ಸಂಗ್ರಹ ಚಿತ್ರ 
ರಾಜ್ಯ

ಹಾಸನ: ಓಎಲ್‌ಎಕ್ಸ್‌ನಲ್ಲಿ ಮಾರಾಟಕ್ಕಿಟ್ಟಿದ್ದ ಬೈಕ್ ಕಳ್ಳನ ಬಂಧನ

ಓಎಲ್‌ಎಕ್ಸ್ ನಲ್ಲಿ ಮಾರಾಟಕ್ಕಿಟ್ಟಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಹಾಸನ:  ಓಎಲ್‌ಎಕ್ಸ್ ನಲ್ಲಿ ಮಾರಾಟಕ್ಕಿಟ್ಟಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

19  ವರ್ಷದ ಪ್ರಮೋದ್ ಬಂಧಿತ ಆರೋಪಿ. ಈತ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ  ಶ್ರವಣಬೆಳಗೊಳದಲ್ಲಿ ಇದೇ ತಿಂಗಳ 9ರಂದು ಒಲೆಕ್ಸ್ ನಲ್ಲಿ‌ ಮಾರಾಟಕ್ಕೆ ಇಟ್ಟಿದ್ದ ಬೈಕ್  ಅನ್ನು ಟೆಸ್ಟ್ ಡ್ರೈವ್ ಗೆ ಪಡೆದು ಪರಾರಿಯಾಗಿದ್ದನು. 

ಘಟನೆಗೆ  ಸಂಬಂಧಿಸಿದಂತೆ ಬೈಕ್ ಮಾಲೀಕ ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು,  ಪ್ರಕರಣದ ಜಾಡು ಹಿಡಿದ ಪೊಲೀಸರು ಆರೋಪಿಯನ್ನು ಹಾಸನದ ರೈಲ್ವೆ ನಿಲ್ದಾಣದಲ್ಲಿ  ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ  ಆರೋಪಿ ತಾನು ಬೈಕ್ ಕೊಳ್ಳುವಷ್ಟು ಆರ್ಥಿಕವಾಗಿ ಸಬಲನಾಗಿರಲಿಲ್ಲ. ಹೀಗಾಗಿ ಗೆಳತಿಯನ್ನು  ಬೈಕ್ ನಲ್ಲಿ ಸುತ್ತಾಡಲು ಬೈಕ್ ಕಳವು ಮಾಡಿರುವುದಾಗಿ ವಿಚಾರಣೆ ವೇಳೆ  ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರಿಂದ ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ನ್ಯೂ ಟೀಂ ಘೋಷಣೆ; ರಾಮ್ ಮಾಧವ್, ಸ್ಮೃತಿ ಜೊತೆ ಕರ್ನಾಟಕದ ಇಬ್ಬರಿಗೆ ಪ್ರಮುಖ ಸ್ಥಾನ!

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

ನಾನು ರಾತ್ರೋರಾತ್ರಿ ಸ್ಟಾರ್ ಆದವನಲ್ಲ, ಕಷ್ಟಪಟ್ಟು ಸ್ಟಾರ್ ಆಗಿದ್ದೇನೆ: ಕಷ್ಟದ ದಿನಗಳನ್ನು ನೆನೆದ ರಾಕಿಂಗ್ ಸ್ಟಾರ್ ಯಶ್‌

ನಟ ದರ್ಶನ್‌ಗೆ ಮತ್ತೊಂದು ಶಾಕ್; ಖುದ್ದು ಹಾಜರಿ ಕೋರಿದ್ದ ಅರ್ಜಿ ವಜಾ; ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಿಗೆ ಸೂಚನೆ

ಅಯೋಧ್ಯೆ ಟ್ರಸ್ಟ್ ಎಸ್‌ಐಟಿ ವರದಿಯನ್ನು ಬಹಿರಂಗ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್