ರಾಜ್ಯ

ಸಾರಿಗೆ ನೌಕರರ ಧರಣಿ: ನಾಳೆ ಬಿಎಂಟಿಸಿ, ಕೆಎಸ್ಆರ್'ಟಿಸಿ ಬಸ್ ಗಳು ರಸ್ತೆಗಿಳಿಯುವುದು ಅನುಮಾನ

Manjula VN

ಬೆಂಗಳೂರು: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸೇಕೆಂದು ಆಗ್ರಹಿಸಿ ಗುರುವಾರ ರಾಜ್ಯ ಸಾರಿಗೆ ಸಂಸ್ಥೆಯ ನೌಕರರು ಕುಟುಂಬ ಸಮೇತ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ನಾಳೆ ಬಿಎಂಟಿಸಿ ಹಾಗೂ ಕೆಎಸ್ಆರ್'ಟಿಸಿ ಬಸ್ ಗಳು ರಸ್ತೆಗಿಳಿಯುವುದು ಅನುಮಾನವೆಂದು ಹೇಳಲಾಗುತ್ತಿದೆ. 

ಸುಮಾರು 20 ಸಾವಿರಕ್ಕೂ ಹೆಚ್ಚು ಸಾರಿಗೆ ಸಿಬ್ಬಂದಿ ನಾಳೆ ಫ್ರೀಡಂಪಾರ್ಕ್ ನಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆಂದು ವರದಿಗಳುಗಳು ತಿಳಿಸಿವೆ. 

ಪಾಟೀಲ ಪುಟ್ಟಪ್ಪ ಹಾಗೂ ಜಯಮೃತ್ಯುಂಜಯ ಸ್ವಾಮೀಜಿಗಳ ನೇತೃತ್ವದಲ್ಲಿ ನೌಕರರು ಹಾಗೂ ಅವರ ಕುಟುಂಬ ಸದಸ್ಯರ ಪ್ರತಿಭಟನೆ ನಡೆಸಲಿದ್ದಾರೆ. 

ಸರ್ಕಾರಿ ನೌಕರರು ಹಾಗೂ ನಿಗಮ ಮಂಡಳಿಗಳ ನೌಕರರ ವೇತನದಲ್ಲಿ ಸಾಕಷ್ಟು ವ್ಯತ್ಯಾಸಗಳಿದೆ. ಅಲ್ಲದೆ, ಸರ್ಕಾರಿ ನೌಕರರಿಗೆ ಸಿಗುತ್ತಿರುವ ಸವಲತ್ತುಗಳು ಕೂಡ ನೀಡಲಾಗುತ್ತಿಲ್ಲ. ನಿಗಮಮಂಡಳಿಗಳು ಆರ್ಥಿಕ ತೊಂದರೆಯಲ್ಲಿರುವುದರಿಂದ ಈ ಸೌಲಭ್ಯ ನೀಡಲಾಗುತ್ತಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. 

SCROLL FOR NEXT