ಸಂಗ್ರಹ ಚಿತ್ರ 
ರಾಜ್ಯ

ಮಹದಾಯಿ ನೀರು ಹಂಚಿಕೆ: ಗೆಜೆಟ್ ಅಧಿಸೂಚನೆ ನಂತರ ಕಾಮಗಾರಿ ಆರಂಭ: ರಮೇಶ್ ಜಾರಕಿಹೊಳಿ

ಉತ್ತರ ಕರ್ನಾಟಕದ ಬಹುದಿನದ ಬೇಡಿಕೆಯಾದ ಮಹದಾಯಿ ಯೋಜನೆಯ ನದಿ ನೀರು ಹಂಚಿಕೆ ವಿಚಾರದಲ್ಲಿ ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಸುಪ್ರಿಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಬೆಂಗಳೂರು: ಉತ್ತರ ಕರ್ನಾಟಕದ ಬಹುದಿನದ ಬೇಡಿಕೆಯಾದ ಮಹದಾಯಿ ಯೋಜನೆಯ ನದಿ ನೀರು ಹಂಚಿಕೆ ವಿಚಾರದಲ್ಲಿ ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಸುಪ್ರಿಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮಹದಾಯಿ ಯೋಜನೆ ಬಗ್ಗೆ ಗೆಜೆಟ್ ಅಧಿಸೂಚನೆ ಹೊರಡಿಸಲೇಬೇಕೆಂದು ಈ ಹಿಂದೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಹಲವು ಬಾರಿ ಮನವಿ ಮಾಡಿತ್ತು. ಗೆಜೆಟ್ ಹೊರಡಿಸಿದ ನಂತರ ೨.೧೮ ಟಿ.ಎಂ.ಸಿ. ಬಂಡೂರ ತಿರುವು ನಾಲೆ ಮತ್ತು ೧.೭೨ ಟಿ.ಎಂ.ಸಿ. ಕಳಸಾ ತಿರುವು ನಾಲೆಯಿಂದ ರಾಜ್ಯಕ್ಕೆ ಒಟ್ಟು ೩.೯೦ ಟಿ.ಎಂ.ಸಿ ನೀರು ಮಲಪ್ರಭಾ ನದಿಗೆ ಹರಿಸಲು ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆದು ಕಾಮಗಾರಿ ಕೈಗೆತ್ತಕೊಳ್ಳುತ್ತೇವೆ ಎಂದಿದ್ದಾರೆ.

ಈ ಕುಡಿಯುವ ನೀರಿನ ಯೋಜನೆಯ ಅನುಷ್ಠಾನಕ್ಕೆ ಈಗಾಗಲೇ ಪರಿಸರ ಇಲಾಖೆಯಿಂದ ವಿನಾಯಿತಿ ಪಡೆದಿದ್ದು ಕೇಂದ್ರ ಜಲ ಆಯೋಗ ಮತ್ತು ಅರಣ್ಯ ಇಲಾಖೆಯ ಅನುಮೋದನೆ ಪಡೆಯಬೇಕಾಗಿದೆ. ಇದಲ್ಲದೇ ಮಹದಾಯಿ ಜಲಾನಯನ ಪ್ರದೇಶದ ಕೆರೆಕಟ್ಟೆಗಳನ್ನು ತುಂಬಲು ೧.೫೦ ಟಿ.ಎಂ.ಸಿ. ನೀರನ್ನು ಬಳಸುತ್ತೇವೆ. ವಿದ್ಯುತ್ ಉತ್ಪಾದನೆಗಾಗಿ ೮.೦೨ ಟಿ.ಎಂ.ಸಿ. ನೀರನ್ನು ಕರ್ನಾಟಕ ವಿದ್ಯುಚ್ಛಕ್ತಿ ನಿಗಮಕ್ಕೆ ನೀಡುತ್ತೇವೆ. ಜತೆಗೆ ಬಳಸಿದ ನೀರನ್ನು ಪುನಃ ನದಿಗೆ ಬಿಡುತ್ತೇವೆ ಎಂದು ಹೇಳಿದ್ದಾರೆ.

ಉತ್ತರ ಕರ್ನಾಟಕದ ರೈತರ ಕನಸು ನನಸಾಗುವ ಸಂದರ್ಭ ಈಗ ಕೂಡಿ ಬಂದಿದೆ. ನಮ್ಮ ಪಾಲಿನ ಒಟ್ಟು ೧೩.೪೨ ಟಿ.ಎಂ.ಸಿ. ನೀರನ್ನು ಸದ್ಭಳಕೆ ಮಾಡಿಕೊಳ್ಳಲು ಸುಪ್ರಿಂ ಕೋರ್ಟ್ ಅವಕಾಶ ಕಲ್ಪಿಸುತ್ತಿರುವುದು ಈ ಭಾಗದ ನೀರಾವರಿ ಯೋಜನೆಗಳನ್ನು ಕಾಲಾಮಿತಿಯಲ್ಲಿ ಅನುಷ್ಠನಗೊಳಿಸಲು ನೆರವಾಗುತ್ತದೆ. ದಾವೆಗಳ ಅಂತಿಮ ಇತ್ಯರ್ಥಕ್ಕಾಗಿ ವಿಚಾರಣೆಯ ದಿನಾಂಕವನ್ನು ಈ ವರ್ಷದ ಜುಲೈ ೧೫ ರಂದು ನಿಗದಿಪಡಿಸಲಾಗಿದೆ. ಅಂದು ನಾವು ಹೆಚ್ಚುವರಿ ದಾಖಲಾತಿಗಳನ್ನು ಸುಪ್ರಿಂ ಕೋರ್ಟ್‌ಗೆ ಸಲ್ಲಿಸಿ ನಮ್ಮ ರಾಜ್ಯಕ್ಕೆ ನ್ಯಾಯಯುತವಾಗಿ ಸಿಗುವ ನೀರನ್ನು ಪಡೆದುಕೊಳ್ಳುತ್ತೇವೆ ಎಂದು ಸಚಿವ ರಮೇಶ್ ಜಾರಕಿ ಹೊಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT