ಸಾಂದರ್ಭಿಕ ಚಿತ್ರ 
ರಾಜ್ಯ

ಬಿಸಿಯೂಟ ಆಹಾರ ಸಾಮಗ್ರಿ ಅಕ್ರಮ ಸಾಗಣೆ: ಮುಖ್ಯ ಶಿಕ್ಷಕ ಅಮಾನತು

ಶಾಲೆಯ ಬಿಸಿಯೂಟ ಆಹಾರ ಸಾಮಗ್ರಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಹಿನ್ನಲೆಯಲ್ಲಿ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಕೆ. ನಂದೀಶ್ ಎಂಬುವವರನ್ನು ಅಮಾನತು ಮಾಡಿ ಕೊಳ್ಳೇಗಾಲ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಚಂದ್ರಪಾಟೀಲ್ ಆದೇಶ ಹೊರಡಿಸಿದ್ದಾರೆ.

ಚಾಮರಾಜನಗರ: ಶಾಲೆಯ ಬಿಸಿಯೂಟ ಆಹಾರ ಸಾಮಗ್ರಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಹಿನ್ನಲೆಯಲ್ಲಿ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಕೆ. ನಂದೀಶ್ ಎಂಬುವವರನ್ನು ಅಮಾನತು ಮಾಡಿ ಕೊಳ್ಳೇಗಾಲ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಚಂದ್ರಪಾಟೀಲ್ ಆದೇಶ ಹೊರಡಿಸಿದ್ದಾರೆ.

ಶಾಲೆಯ ಬಿಸಿಯೂಟದ ಆಹಾರ ಸಾಮಗ್ರಿಗಳನ್ನು ಅಕ್ರಮವಾಗಿ ಶಾಲೆಯಿಂದ ಹೊರ ಸಾಗಿಸುತ್ತಿದ್ದ ಬಗ್ಗೆ ಕೆಲ ಮಾಧ್ಯಮ ಹಾಗೂ ವ್ಯಾಟ್ಸ್ಯಾಪ್ ವಿಡಿಯೋ ದೃಶ್ಯಾವಳಿ ನೀಡಿದ ದೂರನ್ನು ಆಧರಿಸಿ ವಿಚಾರಣೆ ನಡೆಸಲಾಗಿದೆ. ಮೇಲ್ನೋಟಕ್ಕೆ ಆಹಾರ ಸಾಮಗ್ರಿಗಳನ್ನು ಅಕ್ರಮವಾಗಿ ಸಾಗಿಸುತ್ತಿರುವ ಬಗ್ಗೆ ದೃಢಪಟ್ಟಿರುವ ಹಿನ್ನಲೆಯಲ್ಲಿ ಪ್ರಭಾರ ಮುಖ್ಯ ಶಿಕ್ಷಕರಾದ ಕೆ. ನಂದೀಶ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಚಾರಣೆ ಕಾಯ್ದಿರಿಸಿ ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಚಂದ್ರಪಾಟೀಲ್ ಅವರು ತಿಳಿಸಿದ್ದಾರೆ.

ವರದಿ: ಗುಳಿಪುರ ನಂದೀಶ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

'Toxic': ಸಿನಿಮಾ ಮಾಡುವುದು ಸುಲಭವಲ್ಲ, ಇಡೀ ಪ್ರಪಂಚದ ವಿರುದ್ಧ ಯುದ್ಧಕ್ಕೆ ಹೋದಂತೆ': ವದಂತಿಗಳ ನಡುವೆ ಆ ವ್ಯಕ್ತಿ ಬಂಡೆಯಂತೆ ನಿಂತರು- ಯಶ್!

Toxic: ಯಶ್ ಜೊತೆಗೆ ಕಿಯಾರಾ ಬೋಲ್ಡ್ ಅವತಾರ, ಟ್ರೋಲರ್ ಗಳ ಬಾಯಿ ಮುಚ್ಚಿಸಿದ ಪತಿ ಸಿದ್ಧಾರ್ಥ್ ಮಲ್ಹೋತ್ರಾ!

'ಕಳ್ಳಿ, ಕಳ್ಳಿ' ಅಂತಾ ಘೋಷಣೆ ಕೂಗಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲು ತೂರಾಟ, ಕೆಸರು ಎರಚಿ ಆಕ್ರೋಶ! ಭಯಾನಕ Video