ಪಾಕ್ ಪರ ಘೋಷಣೆ ಕೂಗಿದ ಅಮೂಲ್ಯ ಬಂಧನ 
ರಾಜ್ಯ

ವೇದಿಕೆಯಲ್ಲೇ ಪಾಕ್ ಪರ ಘೋಷಣೆ, ತಬ್ಬಿಬ್ಬಾದ ಒವೈಸಿ, ಇಷ್ಟಕ್ಕೂ ಅಲ್ಲಿ ಆಗಿದ್ದೇನು? ಇಲ್ಲಿದೆ ಸಂಪೂರ್ಣ ವಿಡಿಯೋ

ಸಿಎಎ ಹಾಗೂ ಎನ್‍ಸಿಆರ್ ವಿರೋಧಿಸಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆಯುತ್ತಿದ್ದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಯುವತಿ ಪಾಕ್ ಪರ ಘೋಷಣೆ ಕೂಗಿದ ಘಟನೆ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.

ಬೆಂಗಳೂರು: ಸಿಎಎ ಹಾಗೂ ಎನ್‍ಸಿಆರ್ ವಿರೋಧಿಸಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆಯುತ್ತಿದ್ದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಯುವತಿ ಪಾಕ್ ಪರ ಘೋಷಣೆ ಕೂಗಿದ ಘಟನೆ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.

ಸಿಎಎ ಹಾಗೂ ಎನ್‍ಸಿಆರ್ ವಿರೋಧಿಸಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿ ಸುದ್ದಿಗೆ ಗ್ರಾಸವಾಗಿರುವ ಯುವತಿ ಅಮೂಲ್ಯ ವಿರುದ್ಧ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಯುವತಿ ಅಮೂಲ್ಯ ಪಾಕ್ ಪರ ಘೋಷಣೆ ಕೂಗಿದ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.

ಯುವತಿ ಅಮೂಲ್ಯ ಮಾತು ಆರಂಭಿಸುವ ಮುನ್ನವೇ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದರು. ವೇದಿಕೆ ಮೇಲೆ ಬಂದ ಚಿಕ್ಕಮಗಳೂರಿನ ಕೊಪ್ಪ ಮೂಲದ ಯುವತಿ ಅಮೂಲ್ಯ ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಕೂಗಿದ್ದು, ಅಮೂಲ್ಯ ಈ ರೀತಿ ಘೋಷಣೆ ಕೂಗುತ್ತಿದ್ದಂತೆ ವೇದಿಕೆಯಲ್ಲೇ ಇದ್ದ ಓವೈಸಿ ತಬ್ಬಿಬ್ಬಾಗಿದ್ದಾರೆ. ವೇದಿಕೆಯ ಹಿಂಭಾಗಕ್ಕೆ ತೆರಳುತ್ತಿದ್ದ ಒವೈಸಿ, ಪಾಕ್ ಘೋಷಣೆ ಕೇಳುತ್ತಿದ್ದಂತೆಯೇ ಮತ್ತೆ ವೇದಿಕೆಗೆ ದೌಡಾಯಿಸಿ  ಆಕೆಯನ್ನು ತಡೆದಿದ್ದಾರೆ. ಈ ವೇಳೆ ಕಾರ್ಯಕ್ರಮದ ಆಯೋಜಕರೂ ಕೂಡ ಕೂಡಲೇ ಅಮೂಲ್ಯ ಕೈಯಲ್ಲಿದ್ದ ಮೈಕ್ ಅನ್ನು ಕಿತ್ತುಕೊಳ್ಳುವ ಪ್ರಯತ್ನ ಮಾಡುತ್ತಾರೆ.

ಈ ವೇಳೆ ಎಚ್ಚೆತ್ತ ಅಮೂಲ್ಯ ಹಿಂದೂಸ್ತಾನ್ ಜಿಂದಾಬಾದ್ ಎಂದು ಹೇಳಿ ತೇಪೆ ಹಚ್ಚುವ ಕಾರ್ಯಕ್ಕೆ ಮುಂದಾಗುತ್ತಾರೆಯಾದರೂ, ಅಷ್ಟು ಹೊತ್ತಿಗಾಗಲೇ ಆಯೋಕರು ಮತ್ತು ಪೊಲೀಸರು ಆಕೆಯನ್ನು ವೇದಿಕೆಯಿಂದ ಕೆಳಗಿಳಿಸಲು ಮುಂದಾಗುತ್ತಾರೆ. ಬಳಿಕ ಪೊಲೀಸರು ಕೂಡಲೇ ಅಮೂಲ್ಯಳನ್ನು ವೇದಿಕೆಯಿಂದ ಕರೆದುಕೊಂಡು ವಶಕ್ಕೆ ಪಡೆದಿದ್ದಾರೆ. ಇವಿಷ್ಟೂ ಘಟನೆ ಕ್ಯಾಮೆರಾದಲ್ಲಿ ದಾಖಲಾಗಿದ್ದು, ವಿಡಿಯೋ ವೈರಲ್ ಆಗುತ್ತಿದೆ.

ಇನ್ನು ಪಾಕ್ ಪರ ಘೋಷಣೆ ಕೂಗಿದ ಯುವತಿ ಅಮೂಲ್ಯ ವಿರುದ್ಧ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸರು, ಐಪಿಸಿ ಸೆಕ್ಷನ್ 124ಎ (ದೇಶದ್ರೋಹ), 153 (ಎ) (ಎರಡು ಗುಂಪುಗಳ ನಡುವೆ ಶತೃತ್ವ ಬಿತ್ತುವುದು) 153 (ಬಿ) (ಭಾವೈಕ್ಯತೆ, ರಾಷ್ಟ್ಪೀಯ ಐಕ್ಯತೆಗೆ ಧಕ್ಕೆ ತರುವುದು)ರ ಅಡಿ ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ. ಮೂಲಗಳ ಪ್ರಕಾರ ಅಮೂಲ್ಯಳ ಪಾಕಿಸ್ತಾನ್ ಜಿಂದಾಬಾದ್ ಘೋಷಣೆಯ ವಿಡಿಯೋ ಆಧಾರದ ಮೇಲೆ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್