ಸಂಗ್ರಹ ಚಿತ್ರ 
ರಾಜ್ಯ

ಎಸ್.ಎಸ್.ಎಲ್.ಸಿ ಪೂರ್ವ ಸಿದ್ಧತಾ‌ ಪರೀಕ್ಷಾ ಪ್ರಶ್ನೆ ಪತ್ರಿಕೆ ಲೀಕ್: ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

ಎರಡೂವರೆ ಸಾವಿರ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯನ್ನು ಸಂಪೂರ್ಣ ವಿಭಿನ್ನವಾಗಿ‌, ಅತ್ಯಂತ ಸುರಕ್ಷಿತವಾಗಿ ನಿರ್ವಹಿಸುವ ವ್ಯವಸ್ಥೆ ಹಿಂದಿನಿಂದಲೂ‌ ಜಾರಿಯಲ್ಲಿದ್ದು, ಅದನ್ನೇ ಈ ಬಾರಿಯೂ ನಿರ್ವಹಿಸಲಾಗುವುದು. ಅದರ‌ ಬಗ್ಗೆ ಯಾವ ಗೊಂದಲಕ್ಕೆ, ಆತಂಕಕ್ಕೆ ಅವಕಾಶವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ಎರಡೂವರೆ ಸಾವಿರ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯನ್ನು ಸಂಪೂರ್ಣ ವಿಭಿನ್ನವಾಗಿ‌, ಅತ್ಯಂತ ಸುರಕ್ಷಿತವಾಗಿ ನಿರ್ವಹಿಸುವ ವ್ಯವಸ್ಥೆ ಹಿಂದಿನಿಂದಲೂ‌ ಜಾರಿಯಲ್ಲಿದ್ದು, ಅದನ್ನೇ ಈ ಬಾರಿಯೂ ನಿರ್ವಹಿಸಲಾಗುವುದು. ಅದರ‌ ಬಗ್ಗೆ ಯಾವ ಗೊಂದಲಕ್ಕೆ, ಆತಂಕಕ್ಕೆ ಅವಕಾಶವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷಾ ವ್ಯವಸ್ಥೆ ಬೇರೆಯೇ‌ ಆಯಾಮವನ್ನು ಹೊಂದಿರುತ್ತದೆ. ಎರಡೂವರೆ ಸಾವಿರ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯನ್ನು ಸಂಪೂರ್ಣ ವಿಭಿನ್ನವಾಗಿ‌, ಅತ್ಯಂತ ಸುರಕ್ಷಿತವಾಗಿ ನಿರ್ವಹಿಸುವ ವ್ಯವಸ್ಥೆ ಹಿಂದಿನಿಂದಲೂ‌ ಜಾರಿಯಲ್ಲಿದ್ದು, ಅದನ್ನೇ ಈ ಬಾರಿಯೂ ನಿರ್ವಹಿಸಲಾಗುವುದು. ಅದರ‌ ಬಗ್ಗೆ ಯಾವ ಗೊಂದಲಕ್ಕೆ, ಆತಂಕಕ್ಕೆ ಅವಕಾಶವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಎಸ್.ಎಸ್.ಎಲ್.ಸಿ ಪೂರ್ವ ಸಿದ್ಧತಾ‌ ಪರೀಕ್ಷಾ ಪ್ರಶ್ನೆ ಪತ್ರಿಕೆ ಲೀಕ್ ಎನ್ನುವ ಪತ್ರಿಕಾ ವರದಿಗಳ ಕುರಿತಂತೆ ಅವರು ಈ ಪ್ರತಿಕ್ರಿಯೆ ನೀಡಿದ್ದು, ಎಸ್.ಎಸ್.ಎಲ್.ಸಿ ಪೂರ್ವಸಿದ್ಧತಾ ಪರೀಕ್ಷೆಗಳನ್ನು ನಡೆಸುವುದು ಮಕ್ಕಳು ಅಂತಿಮ‌ ಪರೀಕ್ಷೆಯ ಸ್ವರೂಪವನ್ನು‌ ಅರ್ಥ ಮಾಡಿಕೊಳ್ಳಬೇಕೆನ್ನುವ ಉದ್ದೇಶದಿಂದ ಮಾತ್ರವಾಗಿದೆ ಎಂದು ತಿಳಿಸಿದ್ದಾರೆ. ಅಂತಿಮ‌ ಪರೀಕ್ಷೆಯ ಮಾದರಿ ಯಾವ ರೀತಿಯಲ್ಲಿರುತ್ತದೆನ್ನುವ ಪರಿಚಯ ಮಕ್ಕಳಿಗಾಗಲಿ ಎನ್ನುವ ಉದ್ದೇಶದಿಂದ ಈ ಬಾರಿ ಮಂಡಳಿಯೇ ಬಹುಪಾಲು ಶಾಲೆಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ಪೂರೈಸಿದೆ. ಸುಮಾರು 15,000 ಪ್ರೌಢ‌ಶಾಲೆಗಳ ಪೈಕಿ ಸುಮಾರು 2500 ಶಾಲೆಗಳಲ್ಲಿ ಶಿಕ್ಷಕರ ಸಂಘಟನೆಗಳು‌ ನಡೆಸಿದ‌ ಪರೀಕ್ಷೆಗಳನ್ನು ಹೊರತುಪಡಿಸಿ ಉಳಿದೆಲ್ಲ ಶಾಲೆಗಳಿಗೆ ಮಂಡಳಿ ಮುಂಚಿತವಾಗಿಯೇ ಮುದ್ರಿತ ಪ್ರಶ್ನೆ ಪತ್ರಿಕೆಗಳನ್ನು ಪೂರೈಸಿದೆ. 

ಪರೀಕ್ಷೆಗಳು ಆಯಾ ಶಾಲೆಗಳಲ್ಲಿಯೇ, ಆಯಾ ಮುಖ್ಯಶಿಕ್ಷಕರ-ಶಿಕ್ಷಕರ ಮೇಲ್ವಿಚಾರಣೆಯಲ್ಲಿಯೇ ನಡೆದಿವೆ. ಶಾಲಾ ಮುಖ್ಯಸ್ಥರು ಈ ಪರೀಕ್ಷೆಯನ್ನು ನಡೆಸುವ ಜವಾಬ್ದಾರಿ ಹೊಂದಿರುವುದು, ಅವರ ಕೈಗೆ ಪ್ರಶ್ನೆ ಪತ್ರಿಕೆಗಳು ಮುಂಚೆಯೇ ತಲುಪಿರುವುದು ಸಹ ಇಂತಹ ಪರಿಸ್ಥಿತಿಗೆ ಕಾರಣ ಆಗಿರಬಹುದು. ಇದು ಒಂದು ರೀತಿಯ ನೈತಿಕ‌ ಜವಾಬ್ದಾರಿಯ ಪ್ರಶ್ನೆಯಾಗಿತ್ತು. ಇಷ್ಟೆಲ್ಲ ಆದರೂ ಈ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳನ್ನು ಲೀಕ್ ಎಂಬ ಕಲ್ಪನೆಯಿಂದ‌ ಗ್ರಹಿಸುವುದೇ ಸರಿಯಲ್ಲ ವೆನ್ನುವುದು ನನ್ನ ಭಾವನೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಆತಂಕಕ್ಕೆ ಅವಕಾಶ ಇಲ್ಲ
‘ಎಸ್ಸೆಸ್ಸೆಲ್ಸಿ ಪೂರ್ವಸಿದ್ಧತಾ ಪರೀಕ್ಷೆಗಳನ್ನು ನಡೆಸುವುದು ಮಕ್ಕಳು ಅಂತಿಮ‌ ಪರೀಕ್ಷೆಯ ಸ್ವರೂಪವನ್ನು‌ ಅರ್ಥ ಮಾಡಿಕೊಳ್ಳಬೇಕೆನ್ನುವ ಉದ್ದೇಶದಿಂದಷ್ಟೆ. ಅಂತಿಮ‌ ಪರೀಕ್ಷೆಯ ಮಾದರಿ ಯಾವ ರೀತಿಯಲ್ಲಿರುತ್ತದೆ ಎನ್ನುವ ಪರಿಚಯ ಮಕ್ಕಳಿಗಾಗಲಿ ಎನ್ನುವ ಉದ್ದೇಶದಿಂದ ಈ ಬಾರಿ ಮಂಡಳಿಯೇ ಬಹುಪಾಲು ಶಾಲೆಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ಪೂರೈಸಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ಹೇಳಿದ್ದಾರೆ.

‘ಪರೀಕ್ಷೆಗಳು ಆಯಾ ಶಾಲೆಗಳಲ್ಲಿಯೇ, ಆಯಾ ಮುಖ್ಯಶಿಕ್ಷಕರ-ಶಿಕ್ಷಕರ ಮೇಲ್ವಿಚಾರಣೆಯಲ್ಲಿಯೇ ನಡೆದಿವೆ. ಶಾಲಾ ಮುಖ್ಯಸ್ಥರು ಈ ಪರೀಕ್ಷೆಯನ್ನು ನಡೆಸುವ ಜವಾಬ್ದಾರಿ ಹೊಂದಿರುವುದು, ಅವರ ಕೈಗೆ ಪ್ರಶ್ನೆ ಪತ್ರಿಕೆಗಳು ಮುಂಚೆಯೇ ತಲುಪಿರುವುದು ಸಹ ಇಂತಹ ಪರಿಸ್ಥಿತಿಗೆ ಕಾರಣ ಆಗಿರಬಹುದು. ಇಷ್ಟೆಲ್ಲ ಆದರೂ ಈ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳನ್ನು ‘ಸೋರಿಕೆ’ ಎಂಬ ಕಲ್ಪನೆಯಿಂದ‌ ಗ್ರಹಿಸುವುದೇ ಸರಿಯಲ್ಲ ಎನ್ನುವುದು ನನ್ನ ಭಾವನೆ. ಅಂತಿಮ ಪರೀಕ್ಷಾ ವ್ಯವಸ್ಥೆ ಬೇರೆಯೇ‌ ಆಯಾಮ ಹೊಂದಿರುತ್ತದೆ. ಎರಡೂವರೆ ಸಾವಿರ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯನ್ನು ಸಂಪೂರ್ಣ ವಿಭಿನ್ನವಾಗಿ‌, ಅತ್ಯಂತ ಸುರಕ್ಷಿತವಾಗಿ ನಿರ್ವಹಿಸುವ ವ್ಯವಸ್ಥೆ ಹಿಂದಿನಿಂದಲೂ‌ ಜಾರಿಯಲ್ಲಿದ್ದು, ಅದನ್ನೇ ಈ ಬಾರಿಯೂ ನಿರ್ವಹಿಸಲಾಗುವುದು. ಅದರ‌ ಬಗ್ಗೆ ಯಾವ ಗೊಂದಲಕ್ಕೆ, ಆತಂಕಕ್ಕೆ ಅವಕಾಶವಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಏನೇ ಶಾಂತಿ ಒಪ್ಪಂದವಾದ್ರೂ ನಾವು ಅಮೆರಿಕವನ್ನ ನಂಬಲ್ಲ: ಡೊನಾಲ್ಡ್ ಟ್ರಂಪ್ ಗೆ ಶಾಕ್ ಕೊಟ್ಟ Iran

ಮುದುಕ ಗಂಡನ ಜೊತೆ ಖುಷಿಯಾಗಿದ್ದೀರಾ? ಅಭಿಮಾನಿಗೆ ಖಡಕ್ ತಿರುಗೇಟು ಕೊಟ್ಟ Bollywood ನಟ ಅರ್ಬಾಜ್ ಖಾನ್ ಪತ್ನಿ

ಹೇಡಿತನದ ಕೃತ್ಯ: ಜೈಪುರದಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ Abhijeet Dipkeಗೆ ಕಪಾಳ ಮೋಕ್ಷ, ಹಲ್ಲೆ! Video

Women's T20 World Cup 2026: ಪರಸ್ಪರ ಜುಟ್ಟು ಹಿಡಿದ ಭಾರತ-ಪಾಕ್ ಆಟಗಾರ್ತಿಯರು; 'ಜಗಳ' Video ವೈರಲ್; ಅಸಲಿಯತ್ತೇನು?

RSS ನೋಂದಣಿ ಮಾಡಿಸಿ ಎಂಬ ಖರ್ಗೆ ಆಗ್ರಹಕ್ಕೆ ಮೋಹನ್ ಭಾಗ್ವತ್ ಪ್ರತಿಕ್ರಿಯೆ: ಇಲ್ಲಿದೆ ವಿವರ...

SCROLL FOR NEXT