ಸಿ.ಚನ್ನಿಗಪ್ಪ 
ರಾಜ್ಯ

ಮಾಜಿ ಸಚಿವ ಸಿ.ಚನ್ನಿಗಪ್ಪ ನಿಧನ: ಕುಮಾರಸ್ವಾಮಿ ಸೇರಿದಂತೆ ಗಣ್ಯರ ಸಂತಾಪ

ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ರಾಜಕಾರಣಿ  ಹಾಗೂ ಮಾಜಿ ಸಚಿವ ಸಿ.ಚನ್ನಿಗಪ್ಪ ಶುಕ್ರವಾರ ನಿಧನರಾಗಿದ್ದಾರೆ.

ತುಮಕೂರು: ಅನಾರೋಗ್ಯದಿಂದ ಬಳಲುತ್ತಿದ್ದ  ಹಿರಿಯ ರಾಜಕಾರಣಿ ಹಾಗೂ ಮಾಜಿ ಸಚಿವ ಸಿ.ಚನ್ನಿಗಪ್ಪ ಶುಕ್ರವಾರ ನಿಧನರಾಗಿದ್ದಾರೆ.

ಕೆಲ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಸಿಂಗಾಪುರದಲ್ಲಿ ಚಿಕಿತ್ಸೆ ಕೊಡಿಸಿ ಬಳಿಕ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಕೊನೆಯುಸಿರೆಳೆದಿದ್ದಾರೆ.

ಚನ್ನಿಗಪ್ಪ ಕೊರಟಗೆರೆ ವಿಧಾನಸಭಾ ಕ್ಷೇತ್ರದಿಂದ 3 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಧರಂಸಿಂಗ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದರು. ಅಷ್ಟೇ ಅಲ್ಲದೇ ಎಚ್​. ಡಿ.ಕುಮಾರಸ್ವಾಮಿ ಅಧಿಕಾರವಧಿಯಲ್ಲಿ ಅರಣ್ಯ ಸಚಿವರಾಗಿದ್ದರು.

ಸಾಮಾನ್ಯ ರೈತ ಕುಟುಂಬದ ಚನ್ನಿಗಪ್ಪ, ಪೊಲೀಸ್ ಹುದ್ದೆ ತೊರೆದು ರಾಜಕೀಯ ಪ್ರವೇಶ ಮಾಡಿ ಅದರಲ್ಲಿ ಯಶಸ್ಸು ಕಂಡಿದ್ದರು. ಬಳಿಕ ಅವರ ಮಕ್ಕಳನ್ನೂ ರಾಜಕೀಯಕ್ಕೆ ಕರೆತಂದಿದ್ದು, ಪುತ್ರ ಡಿ.ಸಿ ಗೌರಿಶಂಕರ್ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕರಾಗಿದ್ದಾರೆ.

ಜೆಡಿಎಸ್ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಸಿ. ಚೆನ್ನಿಗಪ್ಪ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ, 1 ವರ್ಷ ಶಾಂತಿ ಕಾಪಾಡುವಂತೆ ಷರತ್ತು..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!