ಸಂಗ್ರಹ ಚಿತ್ರ 
ರಾಜ್ಯ

ಚಾಮರಾಜನಗರ: ಕಾಡ್ಗಿಚ್ಚಿಗೆ ಕಾರಣರಾದವರ ಪತ್ತೆಗೆ ಅರಣ್ಯ ಇಲಾಖೆಯಿಂದ ಡ್ರೋನ್ ಕಣ್ಗಾವಲು

ಬಂಡೀಪುರ ಹುಲಿ ರಕ್ಷಿತಾರಣ್ಯದಲ್ಲಿ ಕಳೆದ ವರ್ಷ ಸಂಭವಿಸಿದ ಕಾಡ್ಗಿಚ್ಚಿನಂತಹ ಕಹಿ ಘಟನೆಗಳ ನಂತರ ಕಾಡ್ಗಿಚ್ಚು ತಡೆಗಟ್ಟಲು, ಕಾಡ್ಗಿಚ್ಚಿಗೆ ಕಾರಣರಾದವರನ್ನು ಪತ್ತೆ ಮಾಡಲು ರಾಜ್ಯ ಅರಣ್ಯ ಇಲಾಖೆ ಅಧಿಕಾರಿಗಳು ಡ್ರೋನ್‌ಗಳನ್ನು ಬಳಸಲು ನಿರ್ಧರಿಸಿದ್ದಾರೆ.

ಚಾಮರಾಜನಗರ: ಬಂಡೀಪುರ ಹುಲಿ ರಕ್ಷಿತಾರಣ್ಯದಲ್ಲಿ ಕಳೆದ ವರ್ಷ ಸಂಭವಿಸಿದ ಕಾಡ್ಗಿಚ್ಚಿನಂತಹ ಕಹಿ ಘಟನೆಗಳ ನಂತರ ಕಾಡ್ಗಿಚ್ಚು ತಡೆಗಟ್ಟಲು, ಕಾಡ್ಗಿಚ್ಚಿಗೆ ಕಾರಣರಾದವರನ್ನು ಪತ್ತೆ ಮಾಡಲು ರಾಜ್ಯ ಅರಣ್ಯ ಇಲಾಖೆ ಅಧಿಕಾರಿಗಳು ಡ್ರೋನ್‌ಗಳನ್ನು ಬಳಸಲು ನಿರ್ಧರಿಸಿದ್ದಾರೆ.

ಅರಣ್ಯ ಪ್ರದೇಶಗಳಲ್ಲಿ ಚಟುವಟಿಕೆಗಳನ್ನು ನಿಯಂತ್ರಿಸಲು ಮತ್ತು ನಿಗಾ ಇಡಲು ಸಹ ಡ್ರೋನ್‍ ಗಳನ್ನು ಬಳಸಿಕೊಳ್ಳಲಾಗುತ್ತಿದೆ.

ಹುಲಿ ರಕ್ಷಿತಾರಣ್ಯಗಳಾದ ಬಂಡಿಪುರ, ನಾಗರಹೊಳೆ ಮತ್ತು ಬಂಡೀಪುರಗಳಲ್ಲಿ ಡ್ರೋನ್ ಗಳನ್ನು ಬಳಸಿ, ಮೈಸೂರು ಅಥವಾ ಚಾಮರಾಜನಗರದಲ್ಲಿ ದೃಶ್ಯಗಳ ಪರಿಶೀಲನಾ ಕೇಂದ್ರವನ್ನು ಸ್ಥಾಪಿಸುವ ಕೆಲಸವನ್ನು ಅರಣ್ಯ ಇಲಾಖೆ ಮಾಡುತ್ತಿದೆ.

ಒಟ್ಟು ಹದಿಮೂರು ವಲಯಗಳಲ್ಲಿ 40 ರಿಂದ 50 ಸಿಬ್ಬಂದಿ ನೇಮಕ ಮಾಡಲಿದ್ದು ಅವರು ದಿನದ ಇಪ್ಪತ್ತನಾಲ್ಕು ಗಂಟೆ ಕಾಲ ಕಾಡ್ಗಿಚ್ಚಿನ ಬಗೆಗೆ ನಿಗಾ ಇಡಲಿದ್ದಾರೆ. ಅಲ್ಲದೆ ಇಂತಹಾ ಫೈರ್ ವಾಚರ್ ಗಳಿಗೆ ಅರಣ್ಯ ಇಲಾಖೆ ವತಿಯಿಂದಲೇ ಜೀವವಿಮಾ ಸೌಲಭ್ಯ ಸಹ ದೊರಕಲಿದೆ. ಕೆಲವೊಂದು ದುರಂತಗಳಲ್ಲಿ ಸಿಬ್ಬಂದಿ ಪ್ರಾಣ ಹೋಗುವ ನಿದರ್ಶನಗಳಿರುವ ಕಾರಣ ಇಲಾಖೆ ಈ ಉಪಕ್ರಮಕ್ಕೆ ಮುಂದಾಗಿದೆ.

ಕಳೆದ ವರ್ಷ : ಬಂಡೀಪುರ ಹುಲಿ ರಕ್ಷಿತಾರಣ್ಯದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡು ಸುಮಾರು ಹದಿನೈದು ಸಾವಿರ ಎಕರೆ ಅರಣ್ಯ ಭಸ್ಮವಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT